×
Ad

ಜಾರ್ಖಂಡ್: ಸ್ಪಷ್ಟ ಬಹುಮತದತ್ತ ಕಾಂಗ್ರೆಸ್-ಜೆಎಂಎಂ ಮೈತ್ರಿಕೂಟ; 46 ಕ್ಷೇತ್ರಗಳಲ್ಲಿ ಮುನ್ನಡೆ

Update: 2019-12-23 16:02 IST

ಜಾರ್ಖಂಡ್: ಇಲ್ಲಿನ ವಿಧಾನಸಭಾ ಚುನಾವಣೆಯ ಮತಎಣಿಕೆ ಮುಂದುವರಿದಿದ್ದು, ಸದ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್, ಜೆಎಂಎಂ, ಆರ್ ಜೆಡಿ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯುವಲ್ಲಿ ದಾಪುಗಾಲಿಟ್ಟಿದ್ದು, 46 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಆಡಳಿತ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಿದ್ದು, 26 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಜೆಎಂಎಂನ ಹೇಮಂತ್ ಸೊರೇನ್ ಬರ್ಹೈಟ್ ವಿಧಾನಸಭಾ ಕ್ಷೇತ್ರದಲ್ಲಿ ಮತ್ತು ಡುಮ್ಕಾದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಜೆಎಂಎಂ- ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದಲ್ಲಿ ಸೊರೇನ್ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News