ಗೋಲಿಬಾರ್ ಪ್ರಕರಣ : ನ್ಯಾಯಾಂಗ ತನಿಖೆಗೆ ದ.ಕ. ಜಿಲ್ಲಾ ಮುಸ್ಲಿಂ ಲೀಗ್ ಆಗ್ರಹ
Update: 2019-12-23 20:53 IST
ಮಂಗಳೂರು, ಡಿ.23:ಪ್ರಜಾಸತ್ತಾತ್ಮಕ ಹಾಗೂ ಕಾನೂನಾತ್ಮಕವಾಗಿ ಶಾಂತಿಯುತ ಪ್ರತಿಭಟನೆ ನಡೆಸಿದ ಅಮಾಯಕ ಯುವಕರನ್ನು ಗುಂಡಿಕ್ಕಿ ಕೊಲೆಗೈದ ಪೊಲೀಸರ ಅಮಾನವೀಯ ಕ್ರಮವು ತೀವ್ರ ಖಂಡನೀಯ. ಈ ಘಟನೆಯ ಬಗ್ಗೆ ಸೂಕ್ತ ನ್ಯಾಯಾಂಗ ತನಿಖೆಗೆ ಒಳಪಡಿಸಿ ತಕ್ಷಣವೇ ತಪ್ಪಿತಸ್ಥ ಅಧಿಕಾರಿಗಳನ್ನು ವಜಾಗೊಳಿಸಬೇಕು ಹಾಗೂ ಗಾಯಾಳುಗಳಾಗಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಮುಸ್ಲಿಂ ಯೂತ್ ಲೀಗ್ ಜಿಲ್ಲಾಧ್ಯಕ್ಷ ಸೈಯದ್ ಅಫ್ಹಾಂ ಅಲಿ ತಂಙಳ್ ಆಗ್ರಹಿಸಿದ್ದಾರೆ.