×
Ad

ಸಿಎಎ-ಎನ್‌ಆರ್‌ಸಿ ವಿರೋಧಿಸಿ ಡಿ. 24ರಂದು ಮಡಿಕೇರಿಯಲ್ಲಿ ಪ್ರತಿಭಟನೆ

Update: 2019-12-23 22:00 IST
ಸಾಂದರ್ಭಿಕ ಚಿತ್ರ

ಮಡಿಕೇರಿ ಡಿ. 23 : ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಎನ್‌ಆರ್‌ಸಿ ಹಾಗೂ ಸಿಎಎ ಕಾಯ್ದೆಯ ವಿರುದ್ಧ ಡಿ. 24 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್‍ಗಳ ಒಕ್ಕೂಟದ ಕಾರ್ಯಧ್ಯಕ್ಷ ಪಿ.ಎಮ್. ಖಾಸಿಂ ತಿಳಿಸಿದ್ದಾರೆ.

ರಾಷ್ಟ್ರೀಯ ಪೌರತ್ವ ನೋಂದಾಣಿ ಕಾಯ್ದೆ (ಎನ್‌ಆರ್‌ಸಿ) ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದ್ದು, ಭಾರತದ ವಿವಿಧತೆಯಲ್ಲಿ ಏಕತೆ ಎಂಬ ತತ್ವಕ್ಕೆ ವಿರುದ್ಧವಾಗಿರುವುದು ಕಂಡುಬಂದಿದೆ. ಆದ್ದರಿಂದ ಈ ಕಾಯ್ದೆಯನ್ನು ಹಿಂಪಡೆಯಬೇಕೆಂದು ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್‍ಗಳ ಒಕ್ಕೂಟ ಒತ್ತಾಯಿಸುತ್ತದೆ. ಪ್ರತಿಭಟನೆಗೆ ಭಾರತ ಏಕತೆಯನ್ನು ಭಯಸುವ ಸಾರ್ವಜನಿಕರು ಹಾಗೂ ಜಿಲ್ಲೆಯ ಎಲ್ಲಾ ವರ್ತಕರು, ಅಂಗಡಿ ಮುಂಗಟ್ಟನ್ನು ಮುಚ್ಚಿ ಪ್ರತಿಭಟನೆಗೆ ಜಾತಿ, ಮತ, ಭೇದ ವಿಲ್ಲದೆ ಭಾಗವಹಿಸವಂತೆ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News