ಕೆಪಿಎಸ್‌ಸಿ: 428 ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Update: 2019-12-23 17:45 GMT

ಬೆಂಗಳೂರು, ಡಿ.23: ಕರ್ನಾಟಕ ಲೋಕಸೇವಾ ಆಯೋಗವು 2015 ನೇ ಸಾಲಿನ ಗ್ರೂಪ್ ’ಎ’ ಮತ್ತು ’ಬಿ’ ವೃಂದದ ಗೆಜೆಟೆಡ್ ಪ್ರೊಬೇಷನರ್ಸ್‌ 428 (358+70) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಆಯೋಗದ ವೆಬ್‌ಸೈಟ್ http://kpsc.kar.nic.in/lists ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.

ಈ ಆಯ್ಕೆ ಪಟ್ಟಿಯಲ್ಲಿ ಆಕ್ಷೇಪಣೆಗಳಿದ್ದಲ್ಲಿ ಆಯ್ಕೆಪಟ್ಟಿ ಪ್ರಕಟಗೊಂಡ 7 ದಿನಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಅಯೋಗ, ಉದ್ಯೋಗಸೌಧ ಬೆಂ-01 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News