×
Ad

ಸಿಎಎ, ಎನ್‌ಆರ್‌ಸಿಗೆ ವಿರೋಧ: ರಾಜಧಾನಿಯಲ್ಲಿ ಜನಸಾಗರ

Update: 2019-12-23 23:40 IST

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ಪ್ರಕ್ರಿಯೆ ವಿರೋಧಿಸಿ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಿಟಿಎಂ ಲೇಔಟ್, ಜಯನಗರ, ಯಾರಬ್‌ನಗರ, ಶಿವಾಜಿನಗರ, ಆರ್‌ಟಿ ನಗರ, ವಸಂತನಗರ, ಚಾಮರಾಜಪೇಟೆ, ಗೌರಿಪಾಳ್ಯ, ಗುರಪ್ಪನಪಾಳ್ಯ ಸೇರಿದಂತೆ ಹಲವು ಕಡೆ ಮುಸ್ಲಿಮರು ತಮ್ಮ ವ್ಯಾಪಾರ ವಹಿವಾಟುಗಳನ್ನು ಮಧ್ಯಾಹ್ನವರೆಗೂ ಸ್ವಯಂ ಪ್ರೇರಿತ ಬಂದ್ ಆಚರಿಸಿದರು. ಬಳಿಕ ಇಲ್ಲಿನ ಮಿಲ್ಲರ್ಸ್ ರಸ್ತೆಯ ಖುದ್ದೂಸ್ ಸಾಹೇಬ್ ಮೈದಾನದಲ್ಲಿ ಅಖಿಲ ಕರ್ನಾಟಕ ಮುಸ್ಲಿಮ್ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ ನೇತೃತ್ವದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor