×
Ad

ದಾಂಧಲೆಕೋರರಿಗೆ ಗುಂಡಿಕ್ಕಿದ್ದೇವೆ ಎನ್ನುವ ಸರಕಾರ ಅವರಿಗೆ ಪರಿಹಾರ ಏಕೆ ಘೋಷಿಸಿತು?: ಕುಮಾರಸ್ವಾಮಿ

Update: 2019-12-24 20:54 IST

ಬೆಂಗಳೂರು, ಡಿ. 24: ‘ಬಿಜೆಪಿ ಅಂಗ ಪಕ್ಷಗಳೇ ಸಿಎಎ ವಿರೋಧಿಸುತ್ತಿ. ಸಿಎಎ ಮತ್ತು ಎನ್‌ಆರ್‌ಸಿ ಬಗ್ಗೆ ಮೋದಿ ಮತ್ತು ಅಮಿತ್ ಷಾ ಹೇಳಿಕೆಗಳು ವಿಭಿನ್ನವಾಗಿವೆ. ಕಲ್ಲು ಹೊಡೆದರೂ ತಪ್ಪು, ಗುಂಡು ಹೊಡೆದರೂ ತಪ್ಪು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಹಿಂಸಾತ್ಮಕ ಪ್ರತಿಭಟನೆಗೆ ನನ್ನ ಬೆಂಬಲ ಖಂಡಿತ ಇಲ್ಲ. ಆದರೆ ವಿರೋಧ ಪಕ್ಷದ ಸದಸ್ಯನಾಗಿ ರಾಜ್ಯದ ಕಾನೂನು-ಸುವ್ಯವಸ್ಥೆಗೆ ಭಂಗ ತರುವ ನಿಟ್ಟಿನಲ್ಲಿ ಸರಕಾರ ಪೊಲೀಸರೇ ಪಿತೂರಿ ನಡೆಸಿದರೆ ಸುಮ್ಮನೆ ಕೂರಲಾಗುವುದಿಲ್ಲ. ಇದಕ್ಕೆ ಸಂಬಂಧಿಸಿದವರು ಉತ್ತರ ಕೊಡುವರೇ? ಎಂದು ಆಗ್ರಹಿಸಿದ್ದಾರೆ.

‘ಮಂಗಳೂರಿನ ಪ್ರತಿಭಟನೆ ವೇಳೆ ಸೈಜುಗಲ್ಲುಗಳನ್ನು ತಂದ ವಿಡಿಯೋಗಳನ್ನು ಇಷ್ಟೊಂದು ತಡವಾಗಿ ಬಿಡುಗಡೆಗೊಳಿಸುತ್ತಿರುವ ಸರಕಾರ ಅದಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿದೆ? ಎಷ್ಟು ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದೆ? ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರಿನ ಗಲಭೆಯದೋ? ಅಥವಾ ಬೇರೆಡೆಯದೋ? ಎಂದು ಕುಮಾರಸ್ವಾಮಿ ಸ್ಪಷ್ಟಣೆ ಕೋರಿದ್ದಾರೆ

‘ಮಂಗಳೂರನ್ನು ಕೋಮು ಪ್ರಯೋಗಶಾಲೆ ಮಾಡಿಕೊಂಡಿರುವ ಬಿಜೆಪಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿದ್ದು ಹೇಗೆ? ಮತ್ತು ಏಕೆ? ದಾಂಧಲೆಕೋರರಿಗೆ ಗುಂಡಿಕ್ಕಿದ್ದೇವೆ ಎನ್ನುವ ರಾಜ್ಯ ಸರಕಾರ ಅವರಿಗೆ ಪರಿಹಾರ ಏಕೆ ಘೋಷಿಸಿತು?’ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

‘ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಶಾಂತಿಯುತ ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿ ಲಕ್ಷ ಜನ ಸೇರಿದರೂ ಶಾಂತಿಯುತವಾಗಿ ನಡೆದ ಪ್ರತಿಭಟನೆ ಮಂಗಳೂರಿನಲ್ಲಿ ವಿಕೋಪಕ್ಕೆ ಹೋಗಲು ಕಾರಣವೇನು?’ ಎಂದು ಕುಮಾರಸ್ವಾಮಿ ಕೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News