×
Ad

ಅಲೆಮಾರಿ ಸಮಿತಿ ರಚನೆಗೆ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ

Update: 2019-12-24 22:14 IST

ಉಡುಪಿ, ಡಿ.24: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸುವ ಸಂಬಂಧ ಸರಕಾರದಿಂದ ಜಾರಿಗೊಳ್ಳುವ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಲ್ಲಿನ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಜಾತಿಗಳ ಅನುಷ್ಟಾನ ಸಮಿತಿಯನ್ನು ರಚನೆ ಮಾಡಲು ಇಬ್ಬರು ನಾಮನಿರ್ದೇಶಿತ ಸದಸ್ಯರನ್ನು (ಒಬ್ಬ ಪುರುಷ ಮತ್ತು ಓರ್ವ ಮಹಿಳೆ) ಆಯ್ಕೆ ಮಾಡಬೇಕಾಗಿದ್ದು, ಇದ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಸಮುದಾಯಗಳ ಬಗ್ಗೆ ಕಾಳಜಿಯಿಂದ ಸಕ್ರಿಯವಾಗಿ ಕೆಲಸ ಮಾಡುವ ಮುಖಂಡರು ಅರ್ಜಿಯಲ್ಲಿ ಹೆಸರು, ವಿಳಾಸ ದೂರವಾಣಿ ಸಂಖ್ಯೆಯನ್ನು ಬಿಳಿಹಾಳೆಯಲ್ಲಿ ಬರೆದು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ಇವರಿಗೆ ಜನವರಿ 6ರೊಳಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News