ಪೌರತ್ವ ತಿದ್ದುಪಡಿ ಕಾಯ್ದೆ: ಕೇಂದ್ರ ಸರಕಾರದ ವಿರುದ್ಧ ನಟ ಚೇತನ್ ವಾಗ್ದಾಳಿ
Update: 2019-12-24 22:23 IST
ಬೆಂಗಳೂರು, ಡಿ.24: ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ಕೇಂದ್ರ ಸರಕಾರ ದೇಶಕ್ಕೆ ಏನು ಅಗತ್ಯ ಇದೆ, ದೇಶದ ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಬಿಟ್ಟು ಬೇರೆಲ್ಲಾ ಮಾಡುತ್ತಿದೆ ಎಂದು ಚಿತ್ರನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ಕಾಯ್ದೆ ತಿದ್ದುಪಡಿ ಮಾಡಿದ್ದರಿಂದ ಬುಡಕಟ್ಟು ಜನಾಂಗ, ಸಂತ್ರಸ್ತರಿಗೆ, ಸ್ತ್ರೀಯರಿಗೆ ತೊಂದರೆಯಾಗುತ್ತೆ. ಭಾರತೀಯ ಕಲ್ಪನೆಯ ಚೌಕಟ್ಟಿನಲ್ಲಿ ಭಾರತದ ಸಾಮರಸ್ಯ ಉಳಿಸುವಲ್ಲಿ ಸೋಲುತ್ತಿದ್ದೇವೆ. ಈ ಕಾಯ್ದೆಯನ್ನು ಇಲ್ಲಿಗೇ ಕೈಬಿಟ್ಟು ಪ್ರಪಂಚದಲ್ಲಿ ಭಾರತ ಒಂದು ಮಾದರಿಯಾಗಿ ನಿಲ್ಲಬೇಕಿದೆ ಎಂದು ತಿಳಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಅಹಿಂಸಾ ವಿಧಾನದಲ್ಲಿ ಪ್ರತಿಭಟನೆ ಮಾಡಬೇಕು. ಪೊಲೀಸರು ಪ್ರತಿಭಟನಾಕಾರರ ಮೇಲೆ ದಬ್ಬಾಳಿಕೆ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.