×
Ad

ಮಣಿಪಾಲ ಆಸ್ಪತ್ರೆಗೆ ದಿನೇಶ್ ಗುಂಡುರಾವ್ ಭೇಟಿ

Update: 2019-12-24 22:23 IST

ಉಡುಪಿ, ಡಿ.24: ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿಯ ಆರೋಗ್ಯ ವಿಚಾರಿಸಿದರು.

 ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೇಜಾವರ ಶ್ರೀಗಳ ದರ್ಶನ ಪಡೆದಿದ್ದೇನೆ. ಅವರ ಬಗ್ಗೆ ನನಗೆ ಬಹಳ ಆತಂಕ ಆಗಿತ್ತು. ಅದಕ್ಕಾಗಿ ನಾನು ಅವರನ್ನು ಬಂದು ನೋಡಬೇಕೆಂಬ ನಿರ್ಧಾರ ಮಾಡಿದೆ. ಅವರು ಆದಷ್ಟು ಬೇಗ ಗುಣಮುಖರಾಗಲಿ. ಆಧ್ಯಾತ್ಮಿಕ, ಧಾರ್ಮಿಕ ಸೇವೆ ಮಾಡಿದ ಶಕ್ತಿ ಅವರಲ್ಲಿದೆ ಎಂದರು.

ಎಲ್ಲಾ ವಿಷಯದ ಬಗೆಗೂ ತನ್ನದೇ ಅಭಿಪ್ರಾಯ ವ್ಯಕ್ತಪಡಿಸುವ ಅವರ ಬಗ್ಗೆ ರಾಜ್ಯ, ರಾಷ್ಟ್ರದಲ್ಲಿ ಗೌರವವಿದೆ. ಚಿಕ್ಕ ವಯಸ್ಸಿನಲ್ಲಿ ತಂದೆ ಜೊತೆ ಅವರನ್ನು ನಾನು ಭೇಟಿ ಮಾಡಿದ್ದೆ. ವಯಸ್ಸು ಆದರೂ ಅವರು ಸುಮ್ಮನೇ ಕೂರುತ್ತಿರಲಿಲ್ಲ ಎಂದು ದಿನೇಶ್ ಗುಂಡುರಾವ್ ಹೇಳಿದರು.

ಆ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಯು.ಆರ್.ಸಭಾಪತಿ, ಎಂ.ಎ. ಗಫೂರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News