×
Ad

ಮಕ್ಕಳ ಹಕ್ಕುಗಳಿಗೆ ಧಕ್ಕೆ ಎಸಗುವುದು ಅಪರಾಧ: ಅಮೃತಕಲಾ

Update: 2019-12-24 22:30 IST

 ಬ್ರಹ್ಮಾವರ, ಡಿ.24: ಮಕ್ಕಳಿಗೆ ತಾಯಿಯ ಹೊಟ್ಟೆಯಲ್ಲಿ ಇರುವಾಗಲೆ ಕೆಲವು ಜನ್ಮ ಸಿದ್ದ ಹಕ್ಕುಗಳಿರುತ್ತವೆ. ಮಕ್ಕಳ ಶಿಕ್ಷಣ, ಆರೋಗ್ಯ, ಮಾನಸಿಕ ದೈಹಿಕ ಹಕ್ಕುಗಳಿಗೆ ಧಕ್ಕೆ ಎಸಗುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಅಂತಹ ಪ್ರಕರಣಗಳು ಕಂಡುಬಂದರೆ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತಿಳಿಸ ಬಹುದಾಗಿದೆ ಎಂದು ಉಡುಪಿ ಕಾನೂನು ಸೇವೆಗಳ ಪ್ರಾಧಿಕಾರದ ನ್ಯಾಯವಾದಿ ಅಮೃತಕಲಾ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ, ಉಡುಪಿ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ, ಕಾನೂನು ಸೇವಾ ಪ್ರಾಧಿಕಾರದ ಸಂಯಕ್ತ ಆಶ್ರಯದಲ್ಲಿ ಬ್ರಹ್ಮಾವರ ಸರಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಲಾದ ಮಕ್ಕಳ ಮಾಸೋತ್ಸವದಲ್ಲಿ ಅವರು ಮಕ್ಕಳ ಹಕ್ಕುಗಳ ಕುರಿತು ಮಾತನಾಡುತ್ತಿ ದ್ದರು.

ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ, ಪೊಕ್ಸೋ ಕಾಯಿದೆ ಕುರಿತು ಮಾಹಿತಿ ನೀಡಿದರು. ಉಡುಪಿ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ, ಮಲ್ಲಿಕಾರ್ಜುನ, ಉಡುಪಿ ತಾಪಂ ಸದಸ್ಯ ಸುಧೀರ್ ಕುಮಾರ್ ಶೆಟ್ಟಿ, ವೃಶಾಕ್, ನಟರಾಜ್ ಗಾಣಿಗ, ಶ್ರೀನಿವಾಸ ಶೆಟ್ಟಿಗಾರ್, ಫರ್ನಾಝ್ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಉಪಪ್ರಾಂಶುಪಾಲ ಬಿ.ಟಿ.ನಾಯ್ಕ ಸ್ವಾಗತಿಸಿದರು. ವಾಸು ಆಚಾರ್ ಪರ್ಕಳ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News