ಬಂಡೆಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ: 20 ಪ್ರಯಾಣಿಕರಿಗೆ ಗಾಯ

Update: 2019-12-25 14:05 GMT

ಬೆಳಗಾವಿ, ಡಿ.25: ಬ್ರೇಕ್ ಫೇಲ್ ಆಗಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಬೃಹತ್ ಬಂಡೆಗೆ ಢಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಹೊರವಲಯದಲ್ಲಿ ನಡೆದಿದೆ.

ರೈಲ್ವೆ ನಿಲ್ದಾಣದಿಂದ ಗೋಕಾಕ್ ನಗರದ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿಈ ದುರ್ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯಲ್ಲಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಉಳಿದಂತೆ ನಿರ್ವಾಹಕ ಸೇರಿ ಹಲವು ಪ್ರಯಾಣಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಗೋಕಾಕ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News