ಅಂಗನವಾಡಿಗಳಲ್ಲಿಯೇ ಎಲ್‌ಕೆಜಿ-ಯುಕೆಜಿ ಜಾರಿಗೆ ಚಿಂತನೆ: ಸಚಿವೆ ಶಶಿಕಲಾ ಜೊಲ್ಲೆ

Update: 2019-12-25 16:13 GMT

ಕಲಬುರಗಿ, ಡಿ.25: ಅಂಗನವಾಡಿ ನೌಕರರ ಬೇಡಿಕೆಯಂತೆಯೇ ರಾಜ್ಯದ ಅಂಗನವಾಡಿಗಳಲ್ಲಿಯೇ ಸರಕಾರ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳು ಆರಂಭಿಸಲು ಚಿಂತನೆ ನಡೆಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಹಾರ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಶಾಲಾ ಪೂರ್ವ ತರಗತಿ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಶಿಕ್ಷಣ ಸಚಿವರು, ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ನಿರ್ದೇಶಕರು ಸೇರಿ ನಮ್ಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಜಂಟಿ ಸಭೆ ನಡೆಸಲಾಗುವುದು ಎಂದರು.

ಅಂಗನವಾಡಿಗಳಲ್ಲಿಯೇ ಎಲ್‌ಕೆಜಿ ಆರಂಭಿಸುವ ಪ್ರಸ್ತಾಪ ಈ ಹಿಂದೆಯೇ ಇತ್ತು. ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಆರಂಭಿಸುವುದರಿಂದ ಸರಕಾರಿ ಶಾಲೆಗೆ ಪೆಟ್ಟು ಬಿದ್ದು, ಮಕ್ಕಳ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದರು. ಹೀಗಾಗಿ, ಆ ಪ್ರಸ್ತಾಪವನ್ನು ಮುಂದೂಡಲಾಗಿತ್ತು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News