ಕ್ರಿಕೆಟ್ ಬೆಟ್ಟಿಂಗ್: ಓರ್ವ ಸೆರೆ, ನಗದು ಜಪ್ತಿ

Update: 2019-12-25 16:26 GMT

ಬೆಂಗಳೂರು, ಡಿ.25: ಕ್ರಿಕೆಟ್ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 57 ಸಾವಿರ ನಗದು ಜಪ್ತಿ ಮಾಡಿದ್ದಾರೆ.

ಇಲ್ಲಿನ ಮಹಾಲಕ್ಷ್ಮೀಲೇಔಟ್‌ನ ಮುನೇಶ್ವರ ಬ್ಲಾಕ್ ನಿವಾಸಿ ರವಿ(40) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಜೆಪಿ ನಗರದ 1ನೆ ಹಂತದ ಶಾಖಾಂಬರಿ ನಗರದ ಬಳಿ ಆರೋಪಿಯು ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್‌ನ ಪಂದ್ಯಾವಳಿಗೆ ಬೆಟ್ಟಿಂಗ್ ಕಟ್ಟಿಸಿಕೊಂಡು ಜೂಜಾಟ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ, ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News