"ಬೆಂಕಿಯೊಂದಿಗೆ ಆಟವಾಡದಿರಿ": ಬಿಜೆಪಿಗೆ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ
ಕೋಲ್ಕತಾ, ಡಿ.26: ಹೊಸ ಪೌರತ್ವ ಕಾನೂನನ್ನು ಹಿಂತೆಗೆದುಕೊಳ್ಳದಿರುವವರೆಗೂ ಶಾಂತಿಯುತ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಪ್ರತಿಪಾದಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಬೆಂಕಿಯೊಂದಿಗೆ ಆಟವಾಡದಿರಿ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದರು.
ನಗರದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಬಿಜೆಪಿ ತನ್ನ ಭರವಸೆಗಳನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿದರು
ಮಂಗಳೂರಿನಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ಗುಂಡಿನ ದಾಳಿಗೆ ಬಲಿಯಾದ ಜಲೀಲ್ ಹಾಗೂ ನೌಶೀನ್ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ವಾಪಸ್ ಪಡೆಯುವ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಡಿಸೆಂಬರ್ 19 ರಂದು ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರದಲ್ಲಿ ಜಲೀಲ್ ಹಾಗೂ ನೌಶೀನ್ ಭಾಗಿಯಾಗಿರುವುದು ತನಿಖೆಯಿಂದ ಸಾಬೀತಾದರೆ ಸರ್ಕಾರ ಅವರ ಕುಟುಂಬಗಳಿಗೆ ನೀಡುವುದಿಲ್ಲ ಎಂದು ಕರ್ನಾಟಕ ಸಿಎಂ ಬುಧವಾರ ಸುದ್ದಿಗಾರರಿಗೆ ತಿಳಿಸಿದ್ದರು.
ತಮ್ಮ ಪ್ರತಿಭಟನೆಯನ್ನು ಮುಂದುವರಿಸುವಂತೆ ವಿದ್ಯಾರ್ಥಿಗಳಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲಿಸಿದರು. "ಯಾರಿಗೂ ಭಯಪಡಬೇಡಿ. ಬೆಂಕಿಯೊಂದಿಗೆ ಆಟವಾಡದಂತೆ ನಾನು ಬಿಜೆಪಿಯನ್ನು ಎಚ್ಚರಿಸುತ್ತೇನೆ" ಎಂದು ಬ್ಯಾನರ್ಜಿ ಹೇಳಿದರು.
ಸಿಎಎ ವಿರುದ್ಧ ಮಾತನಾಡುವ ವಿದ್ಯಾರ್ಥಿಗಳಿಗೆ ಬಿಜೆಪಿಯಿಂದ ಬೆದರಿಕೆ ಇದೆ ಎಂದು ರಾಜ್ ಬಜಾರ್‌ನಿಂದ ಕೇಂದ್ರ ಕೊಲ್ಕತ್ತಾದ ಮುಲ್ಲಿಕ್ ಬಜಾರ್‌ಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರು ಆರೋಪಿಸಿದರು.
ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಜಾಮಿಯಾ ಮಿಲ್ಲಿಯಾ, ಐಐಟಿ-ಕಾನ್ಪುರ ಮತ್ತು ಇತರ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು.