ಡಿ.28: ಸಹ್ಯಾದ್ರಿಯಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ
Update: 2019-12-26 20:42 IST
ಮಂಗಳೂರು, ಡಿ.26: ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ ಡಿ.28ರಂದು ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ 2019 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಸಹ್ಯಾದ್ರಿ ಕಾಲೇಜ್ ಹಳೆ ವಿದ್ಯಾರ್ಥಿ ಮತ್ತು ಕೆಎಸ್‌ಆರ್‌ಟಿಸಿ ಮಂಗಳೂರಿನ ಡಿಪೋ ಮ್ಯಾನೇಜರ್ ಎಂ.ಎಸ್. ರಮ್ಯಾ ಕೆ. ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 500 ಹಳೆಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.