ಎಸೆಸೆಲ್ಸಿ, ದ್ವಿತೀಯ ಪಿಯುಸಿ: ವೆಬ್‌ಸೈಟ್‌ನಲ್ಲಿ ಉತ್ತರ ಪತ್ರಿಕೆಗಳ ಪ್ರಕಟ

Update: 2019-12-26 17:29 GMT

ಬೆಂಗಳೂರು, ಡಿ.26: ದ್ವಿತೀಯ ಪಿಯುಸಿ ಮತ್ತು ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಇಲಾಖೆ ವೆಬ್ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ಪ್ರತಿ ವರ್ಷ ಪಿಯುಸಿ ಮತ್ತು ಎಸೆಸೆಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಅಪ್‌ಲೋಡ್ ಮಾಡಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪಿಯುಸಿ ಮತ್ತು ಎಸೆಸೆಲ್ಸಿ ಬೋರ್ಡ್ ನಿರ್ದೇಶಕರುಗಳಿಗೆ ಸೂಚನೆ ನೀಡಿದ್ದಾರೆ. ಕಳೆದ ವರ್ಷ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಶೀಘ್ರವೇ ವೆಬ್‌ಸೈಟ್‌ನಲ್ಲಿ ಸಿಗಲಿದೆ.

ಸಚಿವ ಸುರೇಶ್ ಕುಮಾರ್‌ರ ಸಂವೇದನಾ ಫೋನ್‌ಇನ್ ಕಾರ್ಯಕ್ರಮದಲ್ಲಿ ಟಾಪರ್ಸ್ ಉತ್ತರ ಪತ್ರಿಕೆ ಪ್ರಕಟಿಸುವಂತೆ ಪೋಷಕರು ಮತ್ತು ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಅದಕ್ಕೆ ಸ್ಪಂದಿಸಿರುವ ಸಚಿವರು, ಉತ್ತರ ಪತ್ರಿಕೆಗಳನ್ನು ಅಪ್‌ಲೋಡ್ ಮಾಡುವಂತೆ ತಿಳಿಸಿದ್ದಾರೆ.

ಅತಿ ಹೆಚ್ಚು ಅಂಕ ಪಡೆದವರ ಬರವಣಿಗೆ ಕೌಶಲ್ಯ ಹೇಗಿರುತ್ತದೆ? ಪ್ರಶ್ನೆಗೆ ಉತ್ತರಿಸಿರುವ ವಿಧಾನ ಹೇಗಿದೆ? ಹೀಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ವಿಶೇಷತೆ ಬಗ್ಗೆ ತಿಳಿದುಕೊಳ್ಳಲು ಈ ವಿಧಾನ ಅನುಕೂಲವಾಗಲಿದೆ. ಟಾಪರ್ಸ್ ಉತ್ತರ ಪತ್ರಿಕೆ ನೋಡಿ ವಿದ್ಯಾರ್ಥಿಗಳು ಅದರಿಂದ ಪ್ರಭಾವಿತರಾಗಿ ಅತಿ ಹೆಚ್ಚು ಅಂಕ ಪಡೆಯಲು ಸಹಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News