ಕೇಂದ್ರ ಸರ್ಕಾರ ಸಿಎಎ ಬಗ್ಗೆ ಚರ್ಚಿಸಲು ಸರ್ವಪಕ್ಷಗಳ ಸಭೆ ಕರೆಯಲಿ: ಎಚ್.ವಿಶ್ವನಾಥ್

Update: 2019-12-26 17:43 GMT

ಮೈಸೂರು,ಡಿ.26: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರ ಸಂಬಂಧ ಕೇಂದ್ರ ಸರ್ಕಾರ ಆದಷ್ಟು ಬೇಗ ಸರ್ವ ಪಕ್ಷಗಳ ಸಭೆ ಕರೆದು ಚರ್ಚಿಸಬೇಕು ಎಂದು ಮಾಜಿ ಶಾಸಕ ಎಚ್.ವಿಶ್ವನಾಥ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಆದಷ್ಟು ಬೇಗ ಸರ್ವ ಪಕ್ಷಗಳ ಸಭೆ ಕರೆಯಬೇಕು. ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಬೇಕು. ಪೌರತ್ವ ಕಾಯ್ದೆ ಬಹಳ ಮಹತ್ವದ ಕಾಯ್ದೆಯಾಗಿದೆ. ಇದರಲ್ಲಿ ಹೊಸದೇನೂ ಇಲ್ಲ. ನೆಹರೂ, ಇಂದಿರಾ ಗಾಂಧಿಯವರ ಕಾಲದಿಂದಲೂ ಮುಂದುವರಿದುಕೊಂಡು ಬಂದಿದೆ. ಈಗ ಮೋದಿ ಕಾಲದಲ್ಲೂ ಮುಂದುವರಿದಿದೆ ಹೇಳಿದರು.

ಪೌರತ್ವ ಕಾಯ್ದೆಯ ಬಗ್ಗೆ ದೇಶಾದ್ಯಂತ ಪ್ರಚಾರಕ್ಕಿಂತ ಅಪಪ್ರಚಾರವೇ ಹೆಚ್ಚಾಗುತ್ತಿದೆ. ಜಿ.ಎಸ್.ಟಿ ಅನುಷ್ಠಾನಕ್ಕೂ ಮುನ್ನ ಇದೇ ರೀತಿ ಪ್ರತಿರೋಧ ವ್ಯಕ್ತವಾಗಿತ್ತು. ಆನಂತರ ಎಲ್ಲಾ ರಾಜ್ಯಗಳಲ್ಲೂ ಜಿ.ಎಸ್.ಟಿ ಅನುಷ್ಠಾನಕ್ಕೆ ತರಲಾಯಿತು. ಪೌರತ್ವ ಕಾಯ್ದೆಯ ವಿಚಾರದಲ್ಲೂ ಅದೇ ರೀತಿ ಆಗಲಿದೆ ಎಂದು ಎಚ್.ವಿಶ್ವನಾಥ್ ತಿಳಿಸಿದರು. 

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದ ಬಗ್ಗೆ ಉದ್ವೇಗಕ್ಕೆ ಒಳಗಾಗಿರುವ ಮುಸ್ಲಿಂ ಸಮುದಾಯಕ್ಕೆ ಮನವರಿಕೆ ಮಾಡಿಕೊಡಬೇಕಾಗಿದೆ. ಈ ಬಗ್ಗೆ ಜೆಡಿಎಸ್ ನ ಕುಮಾರಸ್ವಾಮಿ ಹಾಗು ಕಾಂಗ್ರೆಸ್ ನ ಸಿದ್ದರಾಮಯ್ಯ ಅವರನ್ನು ಮನವಿ ಮಾಡುತ್ತೇನೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ನೆಲೆಸಲು ಈ ಇಬ್ಬರೂ ನಾಯಕರು ಕಾರಣೀಭೂತರಾಗಬೇಕು ಎಂದು ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News