ಗಾಂಜಾ ಮಾರಾಟ ಆರೋಪ: ಯುವಕನ ಬಂಧನ
Update: 2019-12-26 23:16 IST
ಮೈಸೂರು,ಡಿ.26: ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೋರ್ವನನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ದೇವ್ (24) ಎಂದು ಗುರುತಿಸಲಾಗಿದ್ದು, ಈತ ಮಂಡಿಮೊಹಲ್ಲಾದಿಂದ ಗಾಂಜಾ ತಂದು ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಎನ್ನಲಾಗಿದೆ.
ಈತನಿಂದ 200 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.