ಚಾರ್ಮಾಡಿ ಘಾಟ್: ಮಿನಿಬಸ್‍ ಗಳ ಸಂಚಾರಕ್ಕೆ ಅನುಮತಿ

Update: 2019-12-26 18:39 GMT

ಚಿಕ್ಕಮಗಳೂರು, ಡಿ.26: ಜಿಲ್ಲೆಯ ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು-ವಿಲ್ಲುಪುರಂ ರಾ.ಹೆದ್ದಾರಿಯ 86.200 ಕಿ.ಮೀ ರಿಂದ 99.200 ಕಿ.ಮೀ (ಕೊಟ್ಟಿಗೆಹಾರ) ವರೆಗಿನ ಚಾರ್ಮಾಡಿ ಘಾಟ್ ಭಾಗದಲ್ಲಿ ಲಘು ವಾಹನಗಳ ಮತ್ತು ಕೆಎಸ್ಸಾರ್ಟಿಸಿ ಮಿನಿ ಬಸ್‍ಗಳ ಸಂಚಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದೆ. 

ಪ್ರಯಾಣಿಕರ ಹಿತದೃಷ್ಟಿಯಿಂದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲವನ್ನು ಪರಿಗಣಿಸಿ ಈ ಭಾಗದಲ್ಲಿ ಲಘು ವಾಹನ ಮತ್ತು ಕೆಎಸ್ಸಾರ್ಟಿಸಿ ಮಿನಿಬಸ್‍ಗಳ ಸಂಚಾರವನ್ನು ಮುಕ್ತಗೊಳಿಸಿ ಡಿ.25ರಿಂದ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕೆಎಸ್ಸಾರ್ಟಿಸಿ ಮಿನಿ ಬಸ್ ಹಾಗೂ ಲಘು ವಾಹನಗಳಾದ ಕಾರುಗಳು, ಜೀಪು, ಟೆಂಪೋ, ವ್ಯಾನ್, ಎಲ್‍ಸಿವಿ (ಮಿನಿ ವ್ಯಾನ್) ದ್ವಿಚಕ್ರ ವಾಹನಗಳು ಹಾಗೂ ಆಂಬುಲೆನ್ಸ್ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅನುವು ಮಾಡಿಕೊಟ್ಟಿದೆ.

ಆದರೆ ಭಾರೀ ವಾಹನಗಳಾದ ಕೆಎಸ್ಸಾರ್ಟಿಸಿ ಬಸ್ಸುಗಳು, ಲಾರಿಗಳು, ಬುಲೆಟ್ ಟ್ಯಾಂಕರ್ ಗಳು, ಷಿಪ್ ಕಾರ್ಗೋ ಕಂಟೈನರ್ಸ್ ಹಾಗೂ ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್ ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಗಾದಿ ಗೌತಮ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News