ಡಿ. 29-31: ಮಲ್ಪೆ ಬೀಚ್ ಉತ್ಸವ
Update: 2019-12-27 22:15 IST
ಉಡುಪಿ, ಡಿ.27:ಜಿಲ್ಲಾಡಳಿತ ಉಡುಪಿ, ಮಲ್ಪೆ ಅಭಿವೃದ್ಧಿ ಸಮಿತಿ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಬೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಿರ್ಮಿತಿ ಕೇಂದ್ರ, ಪಶುಪಾಲನಾ ಇಲಾಖೆ, ಕರಾವಳಿ ಪ್ರವಾಸೋದ್ಯಮ ಸಂಘಟನೆಗಳ ಸಹಯೋಗದೊಂದಿಗೆ ಮಲ್ಪೆ ಬೀಚ್ ಉತ್ಸವ- 2019 ಡಿ.29ರಿಂದ 31ರ ವರೆಗೆ ಮಲ್ಪೆ ಬೀಚ್‌ನಲ್ಲಿ ನಡೆಯಲಿದೆ.
ಡಿ.29ರ ಬೆಳಗ್ಗೆ 9 ಗಂಟೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಕ್ಕರೆ ಸಚಿವ ಸಿ.ಟಿ.ರವಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.