ಉಡುಪಿ: ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ
Update: 2019-12-27 22:17 IST
ಉಡುಪಿ, ಡಿ.27: ಮಂಗಳೂರು ಪೊಲೀಸ್ ಗೋಲಿಬಾರ್‌ನಲ್ಲಿ ಮೃತಪಟ್ಟ ಅಮಾಯಕರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಜಸ್ಟೀಸ್ ಫಾರ್ ಜಲೀಲ್ ಆ್ಯಂಡ್ ನೌಶಿನಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಉಡುಪಿ ಜಾಮೀಯ ಮಸೀದಿ ಎದುರು ಪ್ರತಿಭಟನೆ ನಡೆಸಲಾಯಿತು.
ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ಪ್ರತಿ ಭಟನಕಾರರ ಮೇಲೆ ಲಾಠಿ ಚಾರ್ಜ್ ಹಾಗೂ ಗೋಲಿಬಾರ್ ನಡೆಸಿದ ಪರಿಣಾಮ ಅಮಾಯಕರಾದ ಜಲೀಲ್ ಹಾಗೂ ನೌಶಿನ್ ಜೀವ ಕಳೆದುಕೊಂಡು ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮಂಗಳೂರು ಪೊಲೀಸರ ಈ ಅಮಾನುಷ ಕೃತ್ಯ ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಫಯಾಝ್ ಅಹ್ಮದ್, ಎಸ್‌ಡಿಪಿಐ ರಾಜ್ಯ ಕೌನ್ಸಿಲ್ ಸದಸ್ಯ ಅಶ್ರಫ್ ಮಾಚದ್, ಪಿಎಫ್‌ಐ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್, ಎಸ್‌ಡಿಪಿಐ ಮುಖಂಡ ಸಾದಿಕ್ ಮೊದಲಾದವರು ಉಪಸ್ಥಿತರಿದ್ದರು.