'ಗುಡ್ ನ್ಯೂಸ್' ಸಿನಿಮಾಗೆ ತಡೆ ಕೋರಿ ಅರ್ಜಿ: ವಿಚಾರಣೆ ಮುಂದೂಡಿದ ಹೈಕೋರ್ಟ್
Update: 2019-12-27 23:14 IST
ಬೆಂಗಳೂರು, ಡಿ.27: ನಟ ಅಕ್ಷಯ್ ಕುಮಾರ್ ಹಾಗೂ ಕರೀನಾ ಕಪೂರ್ ಅಭಿನಯದ ಗುಡ್ ನ್ಯೂಸ್ ಹಿಂದಿ ಚಲನಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಿಕೆ ಮಾಡಿದೆ.
ಗುಡ್ ನ್ಯೂಸ್ ಸಿನಿಮಾಗೆ ತಡೆ ನೀಡುವಂತೆ ಸಮೀಮ್ ರಝಾ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಜನವರಿ ಮೊದಲ ವಾರಕ್ಕೆ ಮುಂದೂಡಿಕೆ ಮಾಡಿತು.
ಕೃತಕ ಗರ್ಭಧಾರಣೆ ಚಿಕಿತ್ಸೆ ಚಿತ್ರದ ಕಥಾವಸ್ತುವಾಗಿದೆ. ಚಿತ್ರದ ಇಂದಿರಾ ಐವಿಎಫ್ ಎಂಬ ಸಂಸ್ಥೆ ಹೊರತುಪಡಿಸಿ ಉಳಿದ ಸಂಸ್ಥೆಗಳಲ್ಲಿ ಸರಿಯಾದ ಚಿಕಿತ್ಸೆ ದೊರೆಯುವುದಿಲ್ಲ ಎನ್ನುವ ಅರ್ಥ ಕೊಡುವಂತಿದೆ. ಇದರಿಂದ, ಜನರಿಗೆ ಐವಿಎಫ್ ಚಿಕಿತ್ಸೆ ಬಗ್ಗೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.