×
Ad

ಸಿಎಎ ವಿರುದ್ದ ಕ್ಯಾಂಪಸ್ ಫ್ರಂಟ್ ಆಫ್‌ ಇಂಡಿಯಾದಿಂದ ಅಸಹಕಾರ ಚಳುವಳಿಗೆ ಕರೆ

Update: 2019-12-28 20:49 IST

ಬೆಂಗಳೂರು, ಡಿ.28: ರಾಜ್ಯದಲ್ಲಿ ಎನ್‌ಆರ್‌ಸಿ ಜಾರಿಗೆ ತಂದರೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಅಸಹಕಾರ ಚಳವಳಿಗೆ ಕರೆ ನೀಡಲಿದೆ ಎಂದು ಫ್ರಂಟ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ವದಕತ್ ಶಾ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪೌರತ್ವ ಕಾಯ್ದೆ ವಿರುದ್ಧ ಹೋರಾಟಗಳು ಹೆಚ್ಚಾಗುತ್ತಿವೆ. ಅಸ್ಸಾಂ, ದಿಲ್ಲಿ, ಉತ್ತರಪ್ರದೇಶ, ಕರ್ನಾಟಕ ಸೇರಿದಂತೆ ಪೌರತ್ವ(ತಿದ್ಧುಪಡಿ) ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಪೊಲೀಸರ ದೌರ್ಜನ್ಯ, ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ಇದು ಅತ್ಯಂತ ಖಂಡನಾರ್ಹ ಎಂದರು.

ಕರ್ನಾಟಕದಲ್ಲಿ ತೀವ್ರವಾಗಿ ಹೋರಾಟ ನಡೆಯುತ್ತಿದ್ದರು ಜ.1ರಿಂದ ರಾಜ್ಯದಲ್ಲಿ ಎನ್‌ಆರ್‌ಸಿ ಜಾರಿಗೆ ತರಲಾಗುತ್ತದೆ ಎಂದು ಗೃಹ ಸಚಿವರು ಹೇಳುತ್ತಿರುವುದು ಗೊಂದಲವನ್ನುಂಟು ಮಾಡಿದೆ. ಉಪಚುನಾವಣೆಯಲ್ಲಿ ಗೆದ್ದಂತಹ ಶಾಸಕರು ಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿಯುತ್ತಿದ್ದು, ಅವರ ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಬಿಜೆಪಿ ಈ ಕಾಯ್ದೆ ಜಾರಿ ಮಾಡಲಾಗುತ್ತಿದೆ ಎಂದು ಹೇಳುತ್ತಿದೆ ಎಂದರು.

ರಾಜ್ಯ ಕಾರ್ಯದರ್ಶಿ ಅಶ್ವಾನ್ ಸಾದಿಕ್, ಸಮಿತಿ ಸದಸ್ಯರಾದ ಇಮ್ರಾನ್ ಪಿಜೆ, ಸರ್ಫರಾಝ್ ಗಂಗಾವತಿ,ಅನೀಸ್ ಕುಂಬ್ರ ಉಪಸ್ಥಿತಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News