ಮಲ್ಪೆ ಬೀಚ್ ಉತ್ಸವ ಮುಂದೂಡಿಕೆ
Update: 2019-12-28 22:42 IST
ಉಡುಪಿ, ಡಿ.28: ಜಿಲ್ಲಾಡಳಿತ ಉಡುಪಿ, ಮಲ್ಪೆಅಭಿವೃದ್ಧಿ ಸಮಿತಿ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಿರ್ಮಿತಿ ಕೇಂದ್ರ, ಪಶುಪಾಲನಾ ಇಲಾಖೆ, ಕರಾವಳಿ ಪ್ರವಾಸೋದ್ಯಮ ಸಂಘಟನೆಗಳ ಸಹಯೋಗದೊಂದಿಗೆ ಡಿ.29ರಿಂದ 31ರವರೆಗೆ ನಡೆಯಬೇಕಿದ್ದ ಮಲ್ಪೆ ಬೀಚ್ ಉತ್ಸವ- 2019ನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.