ಪೇಜಾವರ ಶ್ರೀ ನಿಧನಕ್ಕೆ ನಳಿನ್ ಕುಮಾರ್ ಕಂಬನಿ

Update: 2019-12-29 13:03 GMT

ಬೆಂಗಳೂರು, ಡಿ.29: ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವತೀರ್ಥ ಸ್ವಾಮೀಜಿ(88)ಗೆ ಐಸಿಯುನಲ್ಲಿ ಸತತ ಚಿಕಿತ್ಸೆ ನೀಡಲಾಗಿತ್ತು. ಆರಂಭದಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸಿದರೂ, ಕ್ರಮೇಣ ಅವರ ದೇಹದ ಶಕ್ತಿ ತೀವ್ರ ಪ್ರಮಾಣದಲ್ಲಿ ಕುಂದಿತ್ತು. ಇದರಿಂದ ಅವರ ಆರೋಗ್ಯ ಗಣನೀಯವಾಗಿ ಕ್ಷೀಣಿಸಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ದಿಲ್ಲಿಯ ಏಮ್ಸ್ ಆಸ್ಪತ್ರೆ ವೈದ್ಯರ ಜೊತೆ ಸಂಪರ್ಕದಲ್ಲಿದ್ದ ಕೆಎಂಸಿ ವೈದ್ಯರು, ಅವರ ಆರೋಗ್ಯದ ಮಾಹಿತಿ ನೀಡುತ್ತಿದ್ದರು. ಶುಕ್ರವಾರ ಅವರ ಆರೋಗ್ಯದಲ್ಲಿ ತಕ್ಕಮಟ್ಟಿನ ಚೇತರಿಕೆ ಕಂಡು ಬಂದಿತ್ತು. ಆದರೆ, ಶನಿವಾರ ಮಧ್ಯಾಹ್ನದ ಬಳಿಕ ಮತ್ತಷ್ಟು ಕ್ಷೀಣಿಸಿತ್ತು. ಅವರನ್ನು ಉಳಿಸುವ ಯಾವ ಪ್ರಯತ್ನಗಳು ಫಲಿಸಲಿಲ್ಲ ಎಂದು ಅವರು ದುಃಖ ವ್ಯಕ್ತಪಡಿಸಿದ್ದಾರೆ.

ಪೇಜಾವರ ಶ್ರೀಗಳು ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಹೊರಬರಲಿ ಎಂದು ಅವರ ಅಭಿಮಾನಿಗಳು, ಉಡುಪಿ ಮಠದ ಭಕ್ತರು ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿದ್ದರು. ಆದರೆ, ಅವರ ಪ್ರಾರ್ಥನೆ ಕೈಗೂಡಲಿಲ್ಲ. ಉಡುಪಿಯ ಎಂಟು ಮಠಗಳ ಮಠಾದೀಶರಲ್ಲಿಯೇ ಅತ್ಯಂತ ಪ್ರಭಾವಶಾಲಿಯಾಗಿದ್ದ ವಿಶ್ವೇಶತೀರ್ಥರು, ಜಾಗತಿಕ ಮನ್ನಣೆಗಳಿಸಿದ್ದರು. ರಾಜಕೀಯ, ಸಾಮಾಜಿಕ ವಿಚಾರಗಳಲ್ಲಿಯೂ ಅವರು ತೊಡಗಿಸಿಕೊಂಡಿದ್ದರು ಎಂದು ನಳಿನ್‌ಕುಮಾರ್ ಕಟೀಲ್ ಸ್ಮರಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News