ಕೇರಳ: ಸಿಎಎ ವಿರುದ್ಧ ಜಂಟಿ ಪ್ರತಿಭಟನೆಗಳಿಗೆ ನಿರ್ಧಾರ

Update: 2019-12-29 16:38 GMT
ಫೈಲ್ ಫೋಟೊ

ತಿರುವನಂತಪುರ, ಡಿ.29: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರವಿವಾರ ಇಲ್ಲಿ ಕರೆದಿದ್ದ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ-ಧಾರ್ಮಿಕ ಸಂಘಟನೆಗಳ ಸಭೆಯಲ್ಲಿ ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ)ಯ ವಿರುದ್ಧ ಜಂಟಿ ಪ್ರತಿಭಟನೆಗಳನ್ನು ನಡೆಸಲು ನಿರ್ಧರಿಸಲಾಗಿದೆ.

ಸಭೆಯು ಈ ಸಂಬಂಧ ಚರ್ಚೆಗಳನ್ನು ನಡೆಸುವ ಮತ್ತು ಮುಂದಿನ ಕ್ರಮಗಳ ಬಗ್ಗೆ ನಿರ್ಧರಿಸುವ ಹೊಣೆಗಾರಿಕೆಯನ್ನ್ನು ಪಿಣರಾಯಿ ಮತ್ತು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ರಮೇಶ ಚೆನ್ನಿತ್ತಲ ಅವರಿಗೆ ವಹಿಸಿತು.

ಸಿಎಎ ಜಾರಿ ಕುರಿತು ರಾಜ್ಯದ ಕಳವಳವನ್ನು ವ್ಯಕ್ತಪಡಿಸಲು ವಿಶೇಷ ವಿಧಾನಸಭಾ ಅಧಿವೇಶನವನ್ನು ಕರೆಯುವಂತೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಎಡರಂಗ ಸರಕಾರವನ್ನು ಆಗ್ರಹಿಸಿದರೆ ಸಭೆಯಲ್ಲಿ ಭಾಗವಹಿಸಿದ್ದ ಇಬ್ಬರು ನಾಯಕರು ಮುಖ್ಯಮಂತ್ರಿಗಳ ಭಾಷಣದ ಬಳಿಕ ಸಭೆಯು ಅಸಾಂವಿಧಾನಿಕವಾಗಿದೆ ಎಂದು ಆರೋಪಿಸಿ ಸಭಾತ್ಯಾಗ ನಡೆಸಿದರು.

ಸಿಎಎ ವಿರುದ್ಧ ರಾಜ್ಯದಲ್ಲಿ ವಿವಿಧ ಬಗೆಗಳ ಜಂಟಿ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಚೆನ್ನಿತ್ತಲ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ವಿವಿಧ ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ-ಧಾರ್ಮಿಕ ಸಂಘಟನೆಗಳ ಸುಮಾರು 50 ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News