ದುಬೈ: ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

Update: 2019-12-29 17:33 GMT

ದುಬೈ, ಡಿ.29: 33 ವರ್ಷ ವಯಸ್ಸಿನ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಯುಎಇನಲ್ಲಿರುವ ಶಾರ್ಜಾದ ಹೊಟೇಲ್ ಕೊಠಡಿಯೊಂದರಲ್ಲಿ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಯುವಕನ ಸಾವಿಗೆ ಸಂಬಂಧಿಸಿ ಪೊಲೀಸರು ತನಿಖೆಗೆ ಆದೇಶಿಸಿದ್ದಾರೆಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಮೃತ ವ್ಯಕ್ತಿಯು ಒಂದು ರಾತ್ರಿಯ ಅವಧಿಗೆ ಕೊಠಡಿಯನ್ನು ಬಾಡಿಗೆಗೆ ಪಡೆದುಕೊಡಿದ್ದನೆಂದು ಹೊಟೇಲ್‌ನ ಸಿಬ್ಬಂದಿ ತಿಳಿಸಿದ್ದಾರೆ. ಆದರೆ ಅವಧಿ ಮುಗಿದರೂ, ಆತ ಹೊರಬಾರದಿದ್ದಾಗ ಸಿಬ್ಬಂದಿ ದೂರವಾಣಿ ಮೂಲಕ ಆತನನ್ನು ಸಂಪರ್ಕಿಸಲು ಯತ್ನಿಸಿದರು. ಆನಂತರ ಬಲವಾಗಿ ಬಾಗಿಲು ತೆರೆದಾಗ ಆತ ಶೌಚಗ್ನಹದ ಬಾಗಿಲಿನ ಬಳಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿರುವುದು ಕಂಡುಬಂದಿದೆಯೆಂದು ಪೊಲೀಸರು ತಿಳಿಸಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆಯೆಂದು ಅವರು ಹೇಳಿದ್ದಾರೆ. ಇದೊಂದು ಆತ್ಮಹತ್ಯೆಯ ಪ್ರಕರಣವೆಂದು ಪೊಲೀಸರು ಶಂಕಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News