×
Ad

ಚಿಕ್ಕಮಗಳೂರು: ಪೇಜಾವರ ಸ್ವಾಮೀಜಿ ನಿಧನಕ್ಕೆ ಜಿಲ್ಲಾ ಜೆಡಿಎಸ್ ಸಂತಾಪ

Update: 2019-12-29 23:31 IST

ಚಿಕ್ಕಮಗಳೂರು, ಡಿ.29: ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ನಿಧನಕ್ಕೆ ಜಿಲ್ಲಾ ಜೆಡಿಎಸ್ ಮುಖಂಡರು ಸಂತಾಪ ಸಚಿಸಿದ್ದಾರೆ.
ಉಡುಪಿ ಶ್ರೀ ಕೃಷ್ಣಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರು ಸರ್ವಧರ್ಮಿಯರನ್ನು ಗೌರವಿಸುತ್ತಿದ್ದ ಯತಿಗಳಾಗಿದ್ದು, ದೇಶಕ್ಕೆ ಓರ್ವ ಮಾದರಿ ಸಂತರಾಗಿದ್ದರು. ಇಂತಹ ಅಪರೂಪದ ವ್ಯಕ್ತಿತ್ವದ ಸ್ವಾಮೀಜಿ ಇಹಲೋಕ ತ್ಯಜಿಸಿರುವುದು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಜಿಲ್ಲೆಯಲ್ಲಿ ಹಲವು ಶಿಕ್ಷಣ ಸಂಸ್ಥೆಗಳೂ ಸೇರಿದಂತೆ ಮಲೆನಾಡಿನ ಎಸ್ಸಿ, ಎಸ್ಟಿ ಸಮುದಾಯದ ಕಾಲನಿಗಳಿಗೆ ಮೂಲಸೌಕರ್ಯ ಕಲ್ಪಿಸುವಲ್ಲಿ ಅವರು ಶ್ರಮಿಸಿ ಸರಕಾರದ ಕೆಲಸವನ್ನು ತಮ್ಮದೆಂದು ಭಾವಿಸಿ ನಿರ್ವಹಿಸಿದ್ದಾರೆ. ಅಲ್ಲದೇ ನಕ್ಸಲ್ ಸಮಸ್ಯೆ ನಿವಾರಣೆಗೂ ಅವರು ಅವಿರತವಾಗು ದುಡಿದಿದ್ದಾರೆಂದು ಮುಖಂಡರು ಪತ್ರಿಕಾ ಹೇಳಿಕೆಯಲ್ಲಿ ಮುಖಂಡರು ತಿಳಿಸಿದ್ದಾರೆ. 

ವಿಪ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಮಾಜಿ ಶಾಸಕ ವೈಎಸ್‍ವಿ ದತ್ತಾ, ಪಕ್ಷದ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್, ಜಿಲ್ಲಾ ವಕ್ತಾರ ಹೊಲದಗದ್ದೆ ಗಿರೀಶ್, ವಿನಯ್ ಸೇರಿದಂತೆ ಕಾಫಿ ಬೆಳೆಗಾರರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಉತ್ತಮಗೌಡ ಪೇಜಾವರ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News