ಶೀವಸೇನೆಗೆ ತಕ್ಕ ಉತ್ತರ ನೀಡುತ್ತೇವೆ: ಸಚಿವ ಬಿ.ಶ್ರೀರಾಮುಲು

Update: 2019-12-30 13:45 GMT

ಬೆಂಗಳೂರು, ಡಿ. 30: ಸಂಕ್ರಾಂತಿ ಹಬ್ಬದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಷದ ಹೈಕಮಾಂಡ್ ಜತೆ ಸಮಾಲೋಚನೆ ನಡೆಸಿದ್ದಾರೆ. ಹೀಗಾಗಿ ಶೀಘ್ರವೇ ಸಂಪುಟ ವಿಸ್ತರಣೆಯಾಗಲಿದೆ ಎಂದರು.

ಎಲ್ಲ ಧರ್ಮಗುರುಗಳು ಒಂದೇ. ಆದರೆ, ರಾಜಕೀಯ ಕಾರಣಗಳಿಗೆ ದೇವರು, ಧರ್ಮದ ಹೆಸರನ್ನು ದುರುಪಯೋಗಪಡಿಸಿಕೊಳ್ಳುವುದು ಸರಿಯಲ್ಲ ಎಂದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ವಿವಾದಕ್ಕೂ, ಏಸು ಕ್ರಿಸ್ತ ಪ್ರತಿಮೆ ವಿವಾದಕ್ಕೂ ಸಂಬಂಧ ಇದ್ದಂತಿದೆ ಎಂದರು.

ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಹೀಗಿದ್ದರೂ ರಾಜಕೀಯ ಕಾರಣಗಳಿಗಾಗಿ ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಸೃಷ್ಟಿಸಿದ್ದು, ಇದಕ್ಕೆ ಕರ್ನಾಟಕ ಹೆದರುವುದಿಲ್ಲ. ಶೀವಸೇನೆಗೆ ತಕ್ಕ ಉತ್ತರ ನೀಡಲಾಗುವುದು ಎಂದು ರಾಮುಲು ಗುಡುಗಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News