ಮಂಗಳೂರು ಗೋಲಿಬಾರ್ ಪ್ರಕರಣ : ಜ.7ಕ್ಕೆ ಮ್ಯಾಜಿಸ್ಟೀರಿಯಲ್ ತನಿಖೆ - ಡಿಸಿ ಜಗದೀಶ್
Update: 2019-12-30 19:24 IST
ಮಂಗಳೂರು, ಡಿ. 30: ಮಂಗಳೂರು ಗೋಲಿಬಾರ್ ಪ್ರಕರಣದ ಮ್ಯಾಜಿಸ್ಟೀರಿಯಲ್ ತನಿಖೆಯು ಜ. 7ರಂದು ಬೆಳಗ್ಗೆ 11 ಗಂಟೆಗೆ ನಗರದ ಮಿನಿ ವಿಧಾನಸೌಧದ ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ, ಪ್ರಕರಣದ ಮೆಜಿಸ್ಟೀರಿಯಲ್ ತನಿಖಾಧಿಕಾರಿ ಜಗದೀಶ್ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾರೇ ಆಗಲಿ ನನ್ನ ಸಮಕ್ಷಮ ಹಾಜರಾಗಿ ಸಾಕ್ಷ ಅಥವಾ ಹೇಳಿಕೆ ನೀಡಬಹುದಾಗಿದೆ ಎಂದು ಮ್ಯಾಜಿಸ್ಟೀರಿಯಲ್ ತನಿಖಾಧಿಕಾರಿ ಜಗದೀಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಡಿ.19ರಂದು ಮಂಗಳೂರಿನಲ್ಲಿ ಪ್ರತಿಭಟನೆ ಸಮಯದಲ್ಲಿ ಗೋಲಿಬಾರ್‌ಗೆ ಬಲಿಯಾದ ನೌಶಿನ್ ಮತ್ತು ಅಬ್ದುಲ್ ಜಲೀಲ್ ಕುದ್ರೋಳಿ ಸಾವಿನ ಬಗ್ಗೆ ಮೆಜಿಸ್ಟೀರಿಯಲ್ ವಿಚಾರಣೆ ನಡೆಸಲು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರನ್ನು ಡಿ. 23ರಂದು ನೇಮಕ ಮಾಡಲಾಗಿತ್ತು.