ಪೌತ್ವದ ಮೂಲಕ ದೇಶದ ಸಮಸ್ಯೆ ಮರೆಮಾಚುವ ಹುನ್ನಾರ: ಮುನೀರ್ ಕಾಟಿಪಳ್ಳ

Update: 2019-12-30 16:32 GMT

ಬೈಂದೂರು, ಡಿ.30: ದೇಶದ ಆರ್ಥಿಕ ಬಿಕ್ಕಟ್ಟು, ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ, ಕೃಷಿ ಕ್ಷೇತ್ರ ಸಂಕಷ್ಟ ಸೇರಿದಂತೆ ಹಲವು ಸಮಸ್ಯೆಗಳನ್ನು ಮರೆ ಮಾಚಲು ಕೇಂದ್ರ ಸರಕಾರವು ಪೌರತ್ವ ತಿದ್ದುಪಡಿ ಕಾಯಿದೆಯ ಹೆಸರಿನಲ್ಲಿ ಮತೀಯವಾದವನ್ನು ಮುನ್ನಲೆಗೆ ತರಲು ವ್ಯವಸ್ಥಿತ ಹುನ್ನಾರ ನಡೆಸುತ್ತಿದೆ ಎಂದು ಡಿವೈಎಫ್‌ಐ ಕರ್ನಾಟಕ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಹೋರಾಟ ಸಮಿತಿ ಶಿರೂರು ಇದರ ವತಿಯಿಂದ ಸೋಮವಾರ ಶಿರೂರು ಗ್ರಾಪಂ ಕಚೇರಿ ಎದುರು ಹಮ್ಮಿಕೊಳ್ಳ ಲಾದ ಪ್ರತಿಭಟನಾ ಸಭೆಯನ್ನು್ದೇಶಿಸಿ ಅವರು ಮಾತನಾಡುತಿದ್ದರು.

ರಾಜಕೀಯ ಲಾಭಕ್ಕಾಗಿ ಹಿಂದು ಹಾಗೂ ಮುಸ್ಲಿಮರನ್ನು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿರುವ ಬಿಜೆಪಿ, ಈ ಮೂಲಕ ಹಿಂದು ವೊಟ್ ಬ್ಯಾಂಕ್ ಭದ್ರಪಡಿಸಿಕೊಳ್ಳುವ ಕಾರ್ಯ ನಡೆಸುತ್ತಿದೆ. ಸಿಎಎ ಹಾಗೂ ಎನ್‌ಆರ್‌ಸಿಯಿಂದ ಕೇವಲ ಮುಸ್ಲಿಮರು ಮಾತ್ರವಲ್ಲ ಈ ದೇಶದ ಬಡವರು, ಹಿಂದುಳಿದವರ್ಗದವರು, ಆದಿವಾಸಿಗಳು, ದಲಿತರು ಕೂಡ ತೊಂದರೆ ಅನುಭವಿಸಬೇಕಾ ಗುತ್ತದೆ ಎಂದರು.

ದಲಿತ ಸಂಘರ್ಷ ಸಮಿತಿ ಭೀಮವಾದ ರಾಜ್ಯ ಸಂಘಟನಾ ಸಂಚಾಲಕ ಉದಯ ಕುಮಾರ್ ತಲ್ಲೂರು ಮಾತನಾಡಿ, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಈ ದೇಶದ ಮೂಲನಿವಾಸಿಗಳು. ಆರ್ಯರು ಈ ದೇಶಕ್ಕೆ ವಲಸೆ ಬಂದವರು. ಆದರೆ ಅವರೇ ಇಂದು ನಮ್ಮ ಪೌರತ್ವವನ್ನು ಸಾಬೀತು ಪಡಿಸುವಂತೆ ಕೇಳುತ್ತಿದ್ದಾರೆ. ಇದರ ವಿರುದ್ಧ ಒಗ್ಗಟ್ಟಿನ ಹೋರಾಟ ಮಾಡ ಬೇಕಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಜಅಮಾತ್ ಅಧ್ಯಕ್ಷ ಬುಡ್ಡಿ ಅಬೂಬಕ್ಕರ್ ವಹಿಸಿದ್ದರು. ಕಾಂಗ್ರೆಸ್ ಮುಖಂಡ ಎಸ್.ಮದನ್ ಕುಮಾರ್, ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ, ಎಸ್‌ಡಿಪಿಐ ದ.ಕ. ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಸಿಪಿಎಂ ಮುಖಂಡ ವೆಂಕಟೇಶ್ ಕೋಣಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಎಚ್.ಎಸ್.ಸಿದ್ದೀಕ್, ಅನ್ವರ್ ಶಿರೂರು, ನೂರ್ ಮುಹಮ್ಮದ್, ಮುಲ್ಲಾ ಫಾರೂಕ್, ಸದ್ಕೆ ಸಯೀದ್, ಕರಾಣಿ ಮೊಯ್ದಿನ್ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಶಿರೂರು ನೂರಾನಿ ಮಸೀದಿಯಿಂದ ಗ್ರಾಪಂವರೆಗೆ ಮೆರವಣಿಗೆ ನಡೆಸಿ, ಬಳಿಕ ಗ್ರಾಪಂ ಮೂಲಕ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News