ಹೊಸ ವರ್ಷಾಚರಣೆ ಹಿನ್ನಲೆ: ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ
Update: 2019-12-30 22:52 IST
ಮೈಸೂರು,ಡಿ.30: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು ಈ ನಡುವೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.
ಡಿ.31ರ ರಾತ್ರಿ ಚಾಮುಂಡಿ ಬೆಟ್ಟದ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ ಬಾಲಕೃಷ್ಣ ಆದೇಶ ಹೊರಡಿಸಿದ್ದಾರೆ. ಡಿ.31 ರ ರಾತ್ರಿ 9 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಲ್ಲಿನ ನಿವಾಸಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಚಾಮುಂಡಿ ಬೆಟ್ಟ ವೀವ್ ಪಾಯಿಂಟ್ ನಲ್ಲಿ ಮೋಜು ಮಸ್ತಿಗೆ ತಾಣವಾಗುವ ಸಾಧ್ಯತೆ ಮತ್ತು ಮದ್ಯಪಾನ ಮಾಡಿ ಸಂಚಾರಕ್ಕೆ ಕಿರಿಕಿರಿ ಉಂಟುಮಾಡುವ ಈ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.