ಉತ್ತಮ ಪ್ರಜೆಯಾಗಲು ಸಂವಿಧಾನದ ಆಶಯದಂತೆ ನಡೆಯೋಣ: ನ್ಯಾ.ಸಂತೋಷ್ ಹೆಗ್ಡೆ

Update: 2019-12-31 14:13 GMT

ಬೆಂಗಳೂರು, ಡಿ.31: ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಲು ಸಂವಿಧಾನದ ಆಶಯದಂತೆ ನಡಿಯೋಣವೆಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ತಿಳಿಸಿದ್ದಾರೆ.

ಮಂಗಳವಾರ ಕೆಂಗೇರಿ ಸಮೀಪದ ಶೇಷಾದ್ರಿಪುರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂವಿಧಾನದ ನಿಯಮಗಳ ಜೊತೆಗೆ ಮಾನವೀಯ ಮೌಲ್ಯಗಳ ಮೂಲಕ ಯುವ ಪೀಳಿಗೆಯನ್ನು ಕಟ್ಟೋಣವೆಂದು ತಿಳಿಸಿದರು.

ಶೇಷಾದ್ರಿಪುರಂ ಕಾಲೇಜಿನ ಗೌರವ ಕಾರ್ಯದರ್ಶಿ ವೂಡೇ ಪಿ.ಕೃಷ್ಣ ಮಾತನಾಡಿ, ಗಾಂಧೀಜಿಯ ಸರಳತೆ, ಅಹಿಂಸೆ, ಮಾನವೀಯ ಮೌಲ್ಯಗಳಿಂದ ಜಗತ್ತಿಗೆ ಹೆಸರಾದರು. ಅವರ ಚಿಂತನೆಯ ದಾರಿಯಲ್ಲಿ ನಾವೆಲ್ಲರೂ ನಡೆಯುವ ಮೂಲಕ ವೌಲ್ಯಯುತವಾದ ಸಮಾಜವನ್ನು ನಿರ್ಮಿಸೋಣವೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಧರ್ಮದರ್ಶಿಗಳಾದ ಕೃಷ್ಣಸ್ವಾಮಿ, ಡಬ್ಲೂ. ಡಿ. ಅಶೋಕ್, ಕಾಲೇಜಿನ ಕಾರ್ಯಕಾರಿ ಸಮಿತಿ ಸದಸ್ಯ ಜಿ. ಆನಂದ, ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಮತ್ತು ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಜಯರಾಮ್ ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News