×
Ad

ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ: 42 ಪ್ರಕರಣ ದಾಖಲು

Update: 2019-12-31 20:01 IST

ಉಡುಪಿ ಡಿ.31: ಉಡುಪಿ ಜಿಲ್ಲೆಯಲ್ಲಿ ಕೊಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಆದಿಉಡುಪಿ ಮತ್ತು ಬ್ರಹ್ಮಾವರ ಪರಿಸರದಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ದಾಳಿ ನಡೆಸಿ 42 ಪ್ರಕರಣ ದಾಖಲಿಸಿ 7,800 ರೂ. ದಂಡ ವಸೂಲಿ ಮಾಡಲಾಗಿದೆ.

ಈ ಸಂದರ್ಭದಲ್ಲಿ ನಾಮಫಲಕಗಳನ್ನು ವಿತರಿಸಲಾಯಿತು ಹಾಗೂ ಎಲ್ಲಾ ಅಂಗಡಿ, ಹೋಟೇಲ್‌ಗಳಲ್ಲಿ ಆಹಾರ ಸುರಕ್ಷತಾ ಪರವಾನಿಗೆಯನ್ನು ಪರೀಕ್ಷಿಸ ಲಾಯಿತು. ದಾಳಿಯಲ್ಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ್, ತಾಲೂಕು ಆರೋಗ್ಯಾಧಿ ಕಾರಿ ಡಾ.ನಾಗರತ್ನ, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಉಡುಪಿ ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಪ್ರಸನ್ನ ಕುಮಾರ್, ಹಿರಿಯ ಆರೋಗ್ಯ ಮೇಲ್ವಿಚಾರಕ ಆನಂದ್ ಗೌಡ, ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗರ್, ಎನ್.ಟಿ.ಸಿ.ಪಿ. ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಎನ್.ಸಿ.ಡಿ ಜಿಲ್ಲಾ ಸಂಯೋಜಕ ಡಾ.ಆಪನ್, ಪೊಲೀಸ್ ಸಿಬಂದಿ ಸಂತೋಷ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News