×
Ad

ಪ್ರವಾಸಕ್ಕೆ ಬಂದಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಮೃತ್ಯು

Update: 2019-12-31 20:19 IST
ಸಾಂದರ್ಭಿಕ ಚಿತ್ರ

ಕಲಬುರಗಿ, ಡಿ.31: ಕಮಲಾಪುರ ಸಮೀಪದ ಬೆಳಕೋಟಾ ಕೆರೆಯಲ್ಲಿ ಮೂವರು ವಿದ್ಯಾರ್ಥಿಗಳು ಈಜಾಡಲು ಹೋಗಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಹಾಗಾಂವ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಲಕ್ಮಣ ಭೀಮರಾಯ್ಯ ದೊಣ್ಣೂರ್ (14), ಮಂಜುನಾಥ್ ಚನ್ನೂಯಾದವಾಡ್ (15) ಹಾಗೂ ಶೂಭಂ ಶಶೂರ್ ಹುಸುರ್ (15) ಮೃತಪಟ್ಟ ಬಾಲಕರು. ಈ ಮೂವರು ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ನಿವಾಸಿಗಳು ಎಂದು ತಿಳಿದುಬಂದಿದ್ದು, ಅಲ್ಲಿನ ಸಮೀಪದ ಪ್ರತಿಷ್ಠಿತ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗುತ್ತಿದೆ.

ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ಶಾಲೆಯಿಂದ ಒಟ್ಟು 96 ಮಕ್ಕಳು ಪ್ರವಾಸಕ್ಕೆಂದು ಬಂದಿದ್ದಾರೆ. ಇಂದು ಮಧ್ಯಾಹ್ನ ಗಂಡೋರಿ ನಾಲಾ ಸಮೀಪದ ಬೆಳಕೋಟಾ ಕೆರೆ ವೀಕ್ಷಣೆಗೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News