ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಮಚ್ಚೀಂದ್ರ
ಉಡುಪಿ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ಅಕ್ಷಯ್ ಮಚ್ಚೀಂದ್ರ ಹಾಕೆ ಅವರನ್ನು ಸರಕಾರ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.
2015ರ ಬ್ಯಾಂಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಇವರಿಗೆ ಉಡುಪಿ ಜಿಲ್ಲಾ ಎಸ್ಪಿಯಾಗಿ ಭಡ್ತಿ ನೀಡಲಾಗಿದೆ.
ನಿರ್ಗಮನ ಎಸ್ಪಿ ನಿಶಾ ಜೇಮ್ಸ್ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಳಿಸಿ ಆದೇಶ ನೀಡಲಾಗಿದೆ.
2018ರ ಫೆಬ್ರವರಿ 23 ರಂದು ಉಡುಪಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದ ನಿಶಾ, ಮಹಿಳೆಯರ ಸುರಕ್ಷತೆಗಾಗಿ ಜಿಲ್ಲೆಯಲ್ಲಿ ಅಬ್ಬಕ್ಕ ಪಡೆಯನ್ನು ರಚಿಸಿದ್ದರು.
ಅದೇ ರೀತಿ ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಪಿ. ಕೃಷ್ಣಕಾಂತ್ ಅವರನ್ನು ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಳಿಸಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷರಾಗಿದ್ದ ಜಿ.ಕೆ. ಮಿಥುನ್ ಕುಮಾರ್ ಅವರನ್ನು ಉಡುಪಿ ಜಿಲ್ಲಾ ಕಾರ್ಕಳ ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ಅಧೀಕ್ಷಕರಾಗಿ ನಿಯುಕ್ತಿಗೊಳಿಸಿ ಆದೇಶ ನೀಡಲಾಗಿದೆ.