ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: ಅಸ್ಸಾಂಗೆ 1,000 ಕೋಟಿ ರೂ. ನಷ್ಟ

Update: 2019-12-31 17:44 GMT
ಫೈಲ್ ಫೋಟೊ

ಗುವಾಹಟಿ, ಡಿ.31: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ನಡೆದ ಪ್ರತಿಭಟನೆಯಿಂದ ಅಸ್ಸಾಂನ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸುಮಾರು 1000 ಕೋಟಿ ರೂ. ನಷ್ಟ ಅಂದಾಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

 ಡಿಸೆಂಬರ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ರಾಜ್ಯಕ್ಕೆ ಭೇಟಿ ನೀಡುತ್ತಾರೆ. ಆದರೆ ಪ್ರತಿಭಟನೆ ಭುಗಿಲೆದ್ದ ಹಿನ್ನೆಲೆಯಲ್ಲಿ ಅಸ್ಸಾಂಗೆ ಭೇಟಿ ನೀಡುವ ಮುನ್ನ ಅಲ್ಲಿನ ಪರಿಸ್ಥಿತಿಯ ಬಗ್ಗೆ ತಿಳಿದುಕೊಳ್ಳುವಂತೆ ಹಲವು ದೇಶಗಳು ತಮ್ಮ ಪ್ರಜೆಗಳಿಗೆ ಸಲಹೆ ನೀಡಿದ ಕಾರಣ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಜನವರಿಯಲ್ಲೂ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಕಡಿಮೆ ಎಂದು ಅಸ್ಸಾಂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯಂತ ಬರುವಾ ಗುವಾಹಟಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.

ಡಿಸೆಂಬರ್‌ನಿಂದ ಮಾರ್ಚ್ ಅವಧಿಯಲ್ಲಿ ರಾಜ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಡಿಸೆಂಬರ್‌ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ 500 ಕೋಟಿ ಮತ್ತು ಜನವರಿಯಲ್ಲಿ 500 ಕೋಟಿ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ . 2019-20ರ ವಿತ್ತ ವರ್ಷದಲ್ಲಿ ಪ್ರವಾಸಿಗಳ ಸಂಖ್ಯೆ 30% ಕಡಿಮೆಯಾಗುವ ನಿರೀಕ್ಷೆಯಿದೆ ಎಂದವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News