ಪೌರತ್ವ ತಿದ್ದುಪಡಿ ಕಾಯ್ದೆ ಪರ ಜನ ಜಾಗೃತಿ: ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್
Update: 2019-12-31 23:06 IST
ಬೆಂಗಳೂರು, ಡಿ. 31: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಿಸಾನ್ ಮೋರ್ಚಾದವರು ಎತ್ತಿನ ಬಂಡಿ ಮೆರವಣಿಗೆ, ರೈತ ಮೋರ್ಚಾದವರು ಕಾಲ್ನಡಿಗೆ, ಮಾನವ ಸರಪಳಿ, ಪಂಜಿನ ಮೆರವಣಿಗೆ ಮೂಲಕ ಜನ ಜಾಗೃತಿ ಮೂಡಿಸಬೇಕು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸಲಹೆ ಮಾಡಿದ್ದಾರೆ.
ಮಂಗಳವಾರ ಪಕ್ಷದ ಕಚೇರಿಯಲ್ಲಿ ಸಿಎಎ ಕುರಿತು ಬಿಜೆಪಿ ಎಲ್ಲ ಮೋರ್ಚಾಗಳ ಪದಾಧಿಕಾರಿಗಳ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಕಾಯ್ದೆಯಲ್ಲಿನ ಪ್ರಮುಖ ಅಂಶಗಳ ಬಗ್ಗೆ ವಿಪಕ್ಷಗಳ ಷಡ್ಯಂತ್ರದ ವಿರುದ್ಧ ಜಾಗೃತಿ ಆಂದೋಲನದ ಭಾಗವಾಗಿ ನಾಳೆಯಿಂದ ಎಲ್ಲ ಮೋರ್ಚಾ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಪ್ರಚಾರ ನಡೆಸಬೇಕು ಎಂದು ಕರೆ ನೀಡಿದರು.
ಈ ವೇಳೆ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ಮಹೇಶ್ ಟೆಂಗಿನಕಾಯಿ, ಶಾಸಕ ಪಿ.ರಾಜೀವ್, ಭಾರತಿ ಮಗದಮ್, ಡಿ.ಎಸ್.ವೀರಯ್ಯ, ಅಬ್ದುಲ್ ಅಝೀಂ ಸೇರಿದಂತೆ ಇನ್ನಿತರರು ಹಾಜರಿದ್ದರು.