ಮುತ್ತೂಟ್ ಫೈನಾನ್ಸ್ ಕಚೇರಿಗೆ ಕನ್ನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Update: 2020-01-01 14:07 GMT

ಬೆಂಗಳೂರು, ಜ.1: ಮುತ್ತೂಟ್ ಫೈನಾನ್ಸ್ ಕಚೇರಿಗೆ ಕನ್ನ ಆರೋಪ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಪೊಲೀಸರ ವಿಶೇಷ ತಂಡ ಬಂಧಿಸಿದೆ ಎಂದು ವರದಿಯಾಗಿದೆ.

ಕೃತ್ಯವೆಸಗಿದ ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.

ಭದ್ರತಾ ಸಿಬ್ಬಂದಿ ಸಹಾಯದಿಂದ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಪ್ರಕರಣ ಬೆಳಕಿಗೆ ಬಂದ ನಂತರ, ಬೆಂಗಳೂರಿನ ಪೊಲೀಸರ ವಿಶೇಷ ತಂಡವೊಂದು, ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಆರೋಪಿಗಳಿಂದ 10 ಕೆಜಿ ಚಿನ್ನಾಭರಣ ಜಪ್ತಿ ಮಾಡಲಾಗಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏನಿದು ಪ್ರಕರಣ?: ಡಿಸೆಂಬರ್ ತಿಂಗಳಿನಲ್ಲಿ ನಗರದ ವ್ಯಾಪ್ತಿಯ ಮುತ್ತೂಟ್ ಫೈನಾನ್ಸ್ ಕಚೇರಿಯ ಗೋಡೆ ಕೊರೆದ ದುಷ್ಕರ್ಮಿಗಳು, ಬರೋಬ್ಬರಿ 70 ಕೆಜಿ ಚಿನ್ನಾಭರಣ ಕಳವು ಮಾಡಿದ್ದರು. ಈ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News