ಬಸ್ ನಿಲ್ದಾಣದಲ್ಲೇ ಹೆಣ್ಣು‌ ಮಗುವಿಗೆ ಜನ್ಮ ನೀಡಿದ ಮಹಿಳೆ

Update: 2020-01-01 18:21 GMT
ಸಾಂದರ್ಭಿಕ ಚಿತ್ರ

ವಿಜಯಪುರ, ಜ.1: ನಿಡಗುಂದಿ ಬಸ್ ನಿಲ್ದಾಣದಲ್ಲೇ ಮಹಿಳೆಯೊಬ್ಬರು ಹೆಣ್ಣು‌ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಬಾಗೇವಾಡಿಯ ನಿವಾಸಿ ಮಹಾದೇವಿ ವಡ್ಡರ ಮಗುವಿಗೆ ಜನ್ಮ ನೀಡಿದ ತಾಯಿ.

ಸುಮಾರು ಒಂದು ಗಂಟೆಯಿಂದ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಮಹಾದೇವಿಗೆ ಬಸ್ ನಿಲ್ದಾಣದಲ್ಲೇ ಹೆರಿಗೆಯಾಗಿದೆ. ಚಿಕಿತ್ಸೆಗೆಂದು ಬಾಗಲಕೋಟೆ ಆಸ್ಪತ್ರೆಗೆ ಹೊರಡುವ ಸಮಯದಲ್ಲಿ ನಿಡಗುಂದಿ ಬಸ್ ನಿಲ್ದಾಣದಲ್ಲೆ ಹೆರಿಗೆಯಾಗಿದ್ದು, ಬಳಿಕ ಸ್ಥಳೀಯರ ಸಹಾಯದಿಂದ ರಾಂಪೂರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಹಾದೇವಿ ಅವರನ್ನು ದಾಖಲಿಸಲಾಗಿದೆ.

ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News