ಪರಿಶ್ರಮ, ಸಾಧನೆಯೊಂದಿಗೆ ಉತ್ತಮ ಸಮಾಜ ಕಟ್ಟೋಣ: ಝಮೀರುದ್ದೀನ್ ಶಾ
ಕೊಣಾಜೆ, ಜ.2: ಕಲಿಕೆಗೆ ಅಂತ್ಯ ಇರುವುದಿಲ್ಲ. ತಂತ್ರಜ್ಞಾನಗಳ ಬಳಕೆ, ಉತ್ತಮ ಪರಿಶ್ರಮ, ಸಾಧನೆಯ ಮೂಲಕ ಸಮಾಜಕ್ಕೆ ನಮ್ಮಿಂದಾದ ಕೊಡುಗೆ ನೀಡಿ ಮಾದರಿ ಸಮಾಜವನ್ನು ಕಟ್ಟುವ ಛಲ ನಮ್ಮದಾಗಬೇಕಿದೆ ಎಂದು ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಹಾಗೂ ಅಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಲೆಪ್ಟಿನಂಟ್ ಜನರಲ್ ಝಮೀರುದ್ದೀನ್ ಶಾ ಹೇಳಿದ್ದಾರೆ.
ಅವರು ಮಂಗಳವಾರ ನಡುಪದವಿನ ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಮಣಿಪಾಲ ಮಾಹೆ ವಿವಿಯ ಕುಲಪತಿ ಡಾ.ಎಚ್.ವಿನೋದ್ ಭಟ್ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲೇ ಶಿಸ್ತು, ಪ್ರಾಮಾಣಿಕತೆ, ಕಠಿಣ ಪರಿಶ್ರಮದೊಂದಿಗೆ ಮುನ್ನಡೆದರೆ ಉಜ್ವಲ ಭವಿಷ್ಯ ಕಂಡುಕೊಳ್ಳಲು ಸಾಧ್ಯ ಎಂದರು.
ಪಿ.ಎ.ಎಜುಕೇಶನ್ ಟ್ರಸ್ಟ್ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ.ಪಿ.ಎ.ಇಬ್ರಾಹೀಂ ಹಾಜಿ ಮಾತನಾಡಿ, ಉತ್ತಮ ಶಿಕ್ಷಣ ಹಾಗೂ ಪ್ರಾಮಾಣಿಕತೆ, ಪರಿಶ್ರಮದ ಮೂಲಕ ಜೀವನದಲ್ಲಿ ಮುನ್ನಡೆಯುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮೇಘಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿಯ ಕುಲಪತಿ ಮೆಹಬೂಬುಲ್ ಹಕ್, ಸಬೀರ್ ಗಫ್ಫಾರ್, ನೌಷಾದ್ ಸಿದ್ದೀಕ್ ಅಲ್ ಖುರೇಷಿ, ಪಿ.ಎ.ಎಜುಕೇಶನ್ ಟ್ರಸ್ಟ್‌ನ ಹಣಕಾಸು ನಿರ್ದೇಶಕ ಅಹ್ಮದ್ ಕುಟ್ಟಿ, ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಅಬ್ದುಲ್ಲಾ ಶರೀಫ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಾಲೇಜಿನ ಉಪಪ್ರಾಂಶುಪಾಲ ಡಾ.ರಮೀಝ್ ಎಂ.ಕೆ., ಪಿ.ಎ.ಎಜುಕೇಶನಲ್ ಟ್ರಸ್ಟ್‌ನ ಆಡಳಿತ ನಿರ್ದೇಶಕ ಡಾ.ಸರ್ಫ್‌ರಾಝ್ ಹಾಶಿಂ, ಎಂಬಿಎ ವಿಭಾಗದ ನಿರ್ದೇಶಕಿ ಡಾ.ಲತಾ ಕೃಷ್ಣನ್, ಸಂಶೋಧನಾ ವಿಭಾಗದ ಡೀನ್ ಡಾ.ಝಾಹಿದ್ ಅನ್ಸಾರಿ, ಬಯೋಟೆಕ್ನಾಲಜಿಯ ಮುಖ್ಯಸ್ಥ ಡಾ.ಕೃಷ್ಣಪ್ರಸಾದ್, ಕಂಪ್ಯೂಟರ್ ಸಯನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಶರ್ಮಿಳಾ ಕುಮಾರಿ ಎಂ., ಸಿವಿಲ್ ಇಂಜಿನಿಯರಿಂಗ್ ಮುಖ್ಯಸ್ಥ ಡಾ.ಪಾಲಾಕ್ಷಪ್ಪ ಕೆ., ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ಸ್ ಇಂಜಿನಿಯರಿಂಗ್ ಮುಖ್ಯಸ್ಥ ಡಾ.ಎಸ್.ಅಬ್ದುರ್ರಹ್ಮಾನ್, ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ ಇಂಜಿನಿಯರಿಂಗ್ ಮುಖ್ಯಸ್ಥ ಪ್ರೊ.ಜಾನ್ ವಾಲ್ಟರ್, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಅಬ್ದುಲ್ ಮಜೀದ್, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಇಸ್ಮಾಯೀಲ್ ಶಾಫಿ ಎ.ಎಂ., ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಝಿಶಾನ್ ಅಬ್ದುಲ್ಲಾ ಮತ್ತಿತರರು ಉಪಸ್ಥಿತರಿದ್ದರು.
ಪ್ರೊ.ಝಿಶಾನ್ ಪ್ರಾರ್ಥಿಸಿದರು. ಪಿ.ಎ. ಎಜುಕೇಶನಲ್ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ಲಾ ಇಬ್ರಾಹೀಂ ಸ್ವಾಗತಿಸಿದರು.