ಸಿಎಎ ವಿರುದ್ಧ ಕೇರಳ ವಿಧಾನಸಭೆಯ ನಿರ್ಣಯಕ್ಕೆ ಸಾಂವಿದಾನಿಕ ಮಾನ್ಯತೆ ಇಲ್ಲ: ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್
Update: 2020-01-02 13:21 IST
ಕೊಚ್ಚಿ, ಜ.2: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕೇರಳ ವಿಧಾನಸಭೆ ಕೈಗೊಂಡ ನಿರ್ಣಯಕ್ಕೆ ಯಾವುದೇ ಸಾಂವಿಧಾನಿಕ ಅಥವಾ ಕಾನೂನು ಮಾನ್ಯತೆ ಇಲ್ಲ ಎಂದು ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ತಿಳಿಸಿದ್ದಾರೆ.
ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ ಎರಡು ದಿನಗಳ ನಂತರ, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಪೌರತ್ವ ತಿದ್ದುಪಡಿ ಕಾಯ್ದೆಯು ಕೇಂದ್ರದ ವಿಷಯವಾಗಿರುವುದರಿಂದ ಇದರ ವಿರುದ್ಧ ಕ್ರಮಕ್ಕೆ ಯಾವುದೇ ಸಾಂವಿಧಾನಿಕ ಅಥವಾ ಕಾನೂನು ಮಾನ್ಯತೆ ಇಲ್ಲ ಎಂದು ಹೇಳಿದರು.