×
Ad

ಉಡುಪಿ: ಬಾಕಿ ಇರುವ ಪಡಿತರ ಇ-ಕೆವೈಸಿ ಕಾರ್ಯ ಪೂರ್ಣಗೊಳಿಸಲು ಸೂಚನೆ

Update: 2020-01-02 20:23 IST

ಉಡುಪಿ, ಜ.2: ರಾಜ್ಯದ ಎಲ್ಲಾ ಪಡಿತರ ಚೀಟಿದಾರರ ಕುಟುಂಬದ ಸದಸ್ಯರುಗಳ ಇ-ಕೆವೈಸಿಯನ್ನು ಡಿಸೆಂಬರ್ ತಿಂಗಳು ಹಾಗೂ ಜನವರಿ 1ರಿಂದ 10ರವರೆಗೆ ಜಾರಿಗೊಳಿಸಲಾಗಿದೆ. ಈ ದಿನಗಳಲ್ಲಿ ಆನ್‌ಲೈನ್ ಮೂಲಕ ಪಡಿತರ ವಿತರಣಾ ಕಾರ್ಯ ಇರುವುದಿಲ್ಲ ಹಾಗೂ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿ ವರ್ತಕರು ಕಡ್ಡಾಯವಾಗಿ ಅಂಗಡಿಗಳನ್ನು ತೆರೆದು ಅವರ ವ್ಯಾಪ್ತಿಯ ಪಡಿತರ ಚೀಟಿಯಲ್ಲಿರುವ ಸದಸ್ಯರುಗಳ ಇ-ಕೆವೈಸಿ ಕಡ್ಡಾಯಾಗಿ ನಿರ್ವಹಿಸುವಂತೆ ಸೂಚಿಸಲಾಗಿತ್ತು.

ಆದರೆ, ರಾಜ್ಯದಲ್ಲಿ ಈವರೆಗೆ ಇ-ಕೆವೈಸಿ ಸಂಗ್ರಹಿಸುವ ಕಾರ್ಯವು ಶೇ.34.32ರಷ್ಟು ಮಾತ್ರ ಪೂರ್ಣಗೊಂಡಿದ್ದು, ಬಾಕಿ ಇರುವ ಪಡಿತರ ಚೀಟಿದಾರರ ಇ-ಕೆವೈಸಿ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕಾಗಿರುವುದರಿಂದ ಜ.1ರಿಂದ 31ರವರೆಗೆ ಪ್ರತಿದಿನ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಸಂಗ್ರಹಿಸುವ ಕಾರ್ಯವನ್ನು ಕಡ್ಡಾಯವಾಗಿ ನಿರ್ವಹಿಸಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಅಂಗಡಿ ವರ್ತಕರು ಅವರ ವ್ಯಾಪ್ತಿಯ ಪಡಿತರ ಚೀಟಿದಾರರಿಗೆ ಮಾಹಿತಿಯನ್ನು ನೀಡಿ ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳಿಗೆ ಕುಟುಂಬ ಸದಸ್ಯರು ಹಾಜರಾಗಿ ಇ-ಕೆವೈಸಿ ಪಡೆಯಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಆಯುಕ್ತರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News