ಉಡುಪಿ: ವೃದ್ಧ ನಾಪತ್ತೆ
Update: 2020-01-02 20:53 IST
ಉಡುಪಿ, ಜ.2:ಕುಂದಾಪುರ ತಾಲೂಕು ಬೆಳ್ಳಾಲ ಗ್ರಾಮದ ಹೊಸಮನೆ ಮುಡಮುಂದ ನಿವಾಸಿ ರಘುರಾಮ ಶೆಟ್ಟಿ (73) ಎಂಬುವವರು ಡಿ.20 ರಂದು ಆರೋಗ್ಯ ಸರಿಯಿಲ್ಲದ ಕಾರಣ ಕುಂದಾಪುರ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಈವರೆಗೂ ಮನೆಗೆ ವಾಪಾಸ್ ಬಾರದೇ ಕಾಣೆಯಾಗಿದ್ದಾರೆ.
5.5 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.