×
Ad

ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಸರಕಾರ ಈಡೇರಿಸಲಿ: ವಿ.ಎಸ್.ಉಗ್ರಪ್ಪ

Update: 2020-01-03 17:36 IST

ಬೆಂಗಳೂರು, ಜ.3: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾವಿರಾರು ಆಶಾ ಕಾರ್ಯಕರ್ತೆಯರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿರುವುದು ನ್ಯಾಯೋಚಿತವಾಗಿದೆ. ಅವರ ಬೇಡಿಕೆಗಳನ್ನು ಸರಕಾರ ಕೂಡಲೇ ಈಡೇರಿಸಬೇಕೆಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಒತ್ತಾಯಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದಲ್ಲಿ ಗರ್ಭಿಣಿ ಮಹಿಳೆಯರು ಸೇರಿದಂತೆ ಎಲ್ಲ ಜನತೆಯ ಆರೋಗ್ಯ ಸುಧಾರಣೆಯಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ತರವಾಗಿದೆ. ಇದನ್ನು ಸರಕಾರ ಅರಿತುಕೊಂಡು ಅವರ ಬೇಡಿಕೆಗಳನ್ನು ಈಡೇರಿಸುವ ಕಡೆಗೆ ಹೆಚ್ಚಿನ ಒತ್ತು ಕೊಡಬೇಕೆಂದು ತಿಳಿಸಿದರು.

ಇವತ್ತಿನ ಜಾಗತಿಕ ಹಾಗೂ ಆಧುನಿಕ ಯುಗದಲ್ಲಿ ಆಶಾ ಕಾರ್ಯಕರ್ತೆಯರು 12 ಸಾವಿರ ರೂ.ವೇತನ, ಬಾಕಿ ವೇತನ ಹಾಗೂ ಆರೋಗ್ಯ ವಿಮೆ ಒದಗಿಸಬೇಕೆಂದು ಬೇಡಿಕೆ ಮುಂದಿಟ್ಟಿದ್ದಾರೆ. ಇದೆಲ್ಲವೂ ನ್ಯಾಯೋಚಿತವಾಗಿದ್ದು, ಸರಕಾರ ಸ್ಪಂದಿಸಬೇಕೆಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News