ಉಡುಪಿ: ಪಿಎಫ್‌ಐಯಿಂದ 35ಮಂದಿಗೆ ವಿದ್ಯಾರ್ಥಿ ವೇತನ ವಿತರಣೆ

Update: 2020-01-03 12:38 GMT

ಉಡುಪಿ, ಜ.3: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ಇದರ ವತಿಯಿಂದ ಸುಮಾರು 35 ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಉಡುಪಿಯಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಪಿಎಫ್‌ಐ ಉಡುಪಿ ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಂಐಟಿ ಪ್ರೊಫೆಸರ್ ಅಝೀಝ್, ಎಂಇಟಿ ವಿದ್ಯಾ ಸಂಸ್ಥೆಯ ಪ್ರಾಂಶುಪಾಲೆ ಜುನೈದ ಸುಲ್ತಾನ ಹಾಗೂ ಪಿಎಫ್‌ಐ ರಾಜ್ಯ ಸಮಿತಿ ಸದಸ್ಯ ಎ.ಕೆ.ಅಶ್ರಫ್ ಮಾತನಾಡಿದರು.

ಪಿಎಫ್‌ಐ ಜಿಲ್ಲಾ ಕಾರ್ಯದರ್ಶಿ ಫಯಾಝ್ ಅಹ್ಮದ್, ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ಸದಸ್ಯೆ ಝಮ್‌ಝಮ್ ಉಪಸ್ಥಿತರಿದ್ದರು. ಮಸೂದ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News