ತೀರ್ಥಹಳ್ಳಿ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ವೈರಾಣು ಪತ್ತೆ

Update: 2020-01-03 15:17 GMT

ಶಿವಮೊಗ್ಗ, ಜ. 3: ಜ್ವರದಿಂದ ಬಳಲುತ್ತಿದ್ದ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿ ಹೆಮ್ಮಕ್ಕಿ ಗ್ರಾಮದ ನಿವಾಸಿ ನರಸಿಂಹ (50) ಎಂಬವರ ದೇಹದಲ್ಲಿ ಮಂಗನ ಕಾಯಿಲೆ ರೋಗದ ವೈರಾಣು ಪತ್ತೆಯಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. 

ತೀವ್ರ ಜ್ವರದಿಂದ ಬಳಲುತ್ತಿದ್ದ ನರಸಿಂಹರನ್ನು ಇತ್ತೀಚೆಗೆ ತೀರ್ಥಹಳ್ಳಿಯ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯದ ತಪಾಸಣೆಗೆ ಕಳುಹಿಸಿ ಕೊಡಲಾಗಿತ್ತು. ನರಸಿಂಹ ಅವರ ದೇಹದಲ್ಲಿ ಮಂಗನ ಕಾಯಿಲೆ ವೈರಾಣು ಇರುವುದನ್ನು ಶಿವಮೊಗ್ಗದ ಪರಿಮಾಣು ಕ್ರಿಮಿ ಸಂಶೋಧನಾ ಪ್ರಯೋಗಾಲಯದ ವರದಿಯಿಂದ ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನಈಡಿವೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News