ಮೈಸೂರು: ಶಾಸಕ ಜಿ.ಟಿ.ದೇವೇಗೌಡರನ್ನು ತರಾಟೆಗೆ ತೆಗೆದುಕೊಂಡ ರೈತರು

Update: 2020-01-03 16:57 GMT

ಮೈಸೂರು,ಜ.3: ಪವರ್ ಗ್ರಿಡ್ ಬದಲಾವಣೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ ಐದು ದಿನಗಳಿಂದ ಪ್ರತಿಭಟನಾ ಧರಣಿ ನಡೆಸುತಿದ್ದ ಸ್ಥಳಕ್ಕೆ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರ ಜೊತೆ ಆಗಮಿಸಿದ ಶಾಸಕ ಜಿ.ಟಿ.ದೇವೇಗೌಡರನ್ನು ರೈತರು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ನಿಮ್ಮ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುವ ಯಾಚೇಗೌಡನ ಹಳ್ಳಿ ಹಾಲು ಉತ್ಪಾದಕರ ಸಂಘಕ್ಕೆ ಡಿಸಿಸಿ ಬ್ಯಾಂಕ್ ವತಿಯಿಂದ ಪ್ರೋತ್ಸಾಹ ಧನ 18 ಲಕ್ಷ ರೂ. ಬರಬೇಕು. ಅದನ್ನು ಕೂಡಲೇ ಕೊಡಿಸಿ ಎಂದು ಶಾಸಕರನ್ನು ಕೇಳಿದರು. ಆದರೆ ಇದಕ್ಕೂ ನನಗು ಸಂಬಂಧವಿಲ್ಲ ಎಂಬ ಉತ್ತರವನ್ನು ಶಾಸಕರು ನೀಡಿದರು. ಇದರಿಂದ ಮತ್ತಷ್ಟು ಕೆರಳಿದ ರೈತರು, ಇದು ನಿಮ್ಮ ಕ್ಷೇತ್ರದ ಸಮಸ್ಯೆ ನಿಮ್ಮ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಸಂಬಂಧ ಇಲ್ಲ ಎಂದರೆ ಹೇಗೆ ಎಂದು ರೈತರು ತರಾಟೆಗೆ ತೆಗೆದುಕೊಂಡರು.

ಸಂಸದ ಪ್ರತಾಪ್ ಸಂಹ ಮಧ್ಯೆ ಪ್ರವೇಶಿಸಿ ಸಮಾಧಾನಪಡಿಸಲು ಯತ್ನಿಸಿದರಾದರೂ ರೈತರು ಬಗ್ಗಲಿಲಲ್ಲ. ಇದರಿಂದ ಬೇಸರಗೊಂಡ ಶಾಸಕ ಜಿ.ಟಿ.ದೇವೇಗೌಡ ಸ್ಥಳದಿಂದ ನಿರ್ಗಮಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News