ಕೊಂಕಣಿ ಮಂಚ್ ಆಗ್ರಹ ಅಪ್ರಸ್ತುತ: ಆರ್.ವಿ.ದೇಶಪಾಂಡೆ

Update: 2020-01-04 18:08 GMT

ಬೆಂಗಳೂರು, ಜ.4: ರಾಜ್ಯದ ಕಾರವಾರ ಹಾಗೂ ಜೋಯಿಡಾ ತಾಲೂಕುಗಳನ್ನು ಗೋವಾ ರಾಜ್ಯಕ್ಕೆ ಸೇರಿಸಬೇಕೆಂದು ಕೊಂಕಣಿ ಮಂಚ್ ಆಗ್ರಹಿಸುತ್ತಿರುವುದು ಅಪ್ರಸ್ತುತ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಈ ಭಾಗದಲ್ಲಿ ವಾಸಿಸುತ್ತಿರುವ ಜನರು ಅತ್ಯಂತ ಶಾಂತಿ, ಸಹಬಾಳ್ವೆ ಹಾಗೂ ಸಹೋದರತ್ವ, ಭಾತೃತ್ವ ಭಾವನೆಯಿಂದ ಜೀವನ ಸಾಗಿಸುತ್ತಿದ್ದಾರೆ. ಜೊತೆಗೆ ರಾಜ್ಯ ಸರಕಾರದ ಸೌಲಭ್ಯಗಳನ್ನು ಪಡೆದು ಸಂತೋಷ ಹಾಗೂ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ಕೊಂಕಣಿ ಭಾಷಿಕರಿರುವ ಕಾರವಾರ ಹಾಗೂ ಜೋಯಿಡಾ ತಾಲೂಕುಗಳನ್ನು ಗೋವಾಗೆ ಸೇರಿಸಬೇಕು ಎಂದು ಒತ್ತಾಯಿಸುತ್ತಿರುವುದು ಅಸಮಂಜಸವಾಗಿದೆ ಎಂದು ದೇಶಪಾಂಡೆ ಪ್ರಕಟನೆಯಲ್ಲಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News