ರಾಮನಗರ ಜಿಲ್ಲೆ ಮರುನಾಮಕರಣ ಪ್ರಸ್ತಾವ ಇಲ್ಲ: ಮುಖ್ಯಮಂತ್ರಿ ಸ್ಪಷ್ಟನೆ

Update: 2020-01-05 15:38 GMT

ಬೆಂಗಳೂರು, ಜ.5: ರಾಮನಗರ ಜಿಲ್ಲೆಯ ಮರುನಾಮಕರಣ ಮಾಡುವ ಯಾವುದೇ ಪ್ರಸ್ತಾವ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

"ರಾಮನಗರ ಜಿಲ್ಲೆ ಮರುನಾಮಕರಣ ಬಗ್ಗೆ ಅನಾವಶ್ಯಕ ಚರ್ಚೆ ನಡೆಯುತ್ತಿದೆ. ಸರಕಾರದ ಮುಂದೆ ಆ ತರಹದ ಯಾವುದೇ ಯೋಚನೆ ಇಲ್ಲ" ಎಂದು ಅವರು ಹೇಳಿದ್ದಾರೆ. 

ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರುಗಳು ಯಾವುದೇ ಹುರುಳಿಲ್ಲದ ಚರ್ಚೆಯಲ್ಲಿ ತೊಡಗಿದ್ದಾರೆ. ಬಹುಶಃ ಆ ಎರಡು ಪಕ್ಷಗಳ ನಾಯಕರುಗಳು ಸುದ್ದಿಯಲ್ಲಿರಲು ಮತ್ತು ಜನರಲ್ಲಿ ಗೊಂದಲ ಸೃಷ್ಟಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಸರಕಾರದ ಮುಂದೆ ಯಾವುದೇ ಆ ತರಹದ ವಿಷಯವಾಗಲೀ, ಅಥವಾ ಕಾರ್ಯ ಸೂಚಿಯಾಗಲಿ ಇಲ್ಲವೆಂದು ಸ್ಷಷ್ಠಪಡಿಸುತ್ತೇನೆ ಎಂದು ಬಿಎಸ್ ವೈ ಹೇಳಿದ್ದಾರೆ.

ಶ್ರೀ ರಾಮನ ಬಗ್ಗೆ ನಮಗೆ ಇರುವ ಭಕ್ತಿಯಾಗಲೀ ಅಥವಾ ಅಭಿಮಾನವಾಗಲೀ ಯಾರು ಪ್ರಶ್ನಿಸಲು ಸಾಧ್ಯವಿಲ್ಲ. ನನಗೆ ಆಶ್ಚರ್ಯವೇನೆಂದರೆ ಕಾಂಗ್ರೆಸ್‍ನವರಿಗಾಗಲೀ ಜೆಡಿಎಸ್ ನವರಿಗಾಗಲೀ ರಾಮನ ಬಗ್ಗೆ ಭಕ್ತಿ ಹುಟ್ಟಿದ್ದು. ಅವರ ಭಕ್ತಿ ನಿಜವಾಗಿದ್ದರೆ ಅದನ್ನು ಸ್ವಾಗತಿಸುತ್ತೇನೆ ಎಂದು ಯಡಿಯೂರಪ್ಪ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್, ಜೆಡಿಎಸ್ ನಾಯಕರು ಇಲ್ಲದ ವಿಷಯದ ಬಗ್ಗೆ ಹೋರಾಟ ಮಾಡಲು ಹೊರಟಿರುವುದು ಹಾಸ್ಯಾಸ್ಪದವಾಗಿದೆ ಎಂದು ಬಿಎಸ್ ವೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News